ಮಡಿಕೇರಿ, ಜೂ. ೨೫: ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಸಮಿತಿ ಬಿ.ಎಲ್.ಎ ೨ ಅವರಿಗೆ ಎಸ್.ಐ.ಆರ್. ಕುರಿತು ತರಬೇತಿ ಕಾರ್ಯಾಗಾರ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಹೇಗೆ ನಡೆಯುತ್ತದೆ ಮತ್ತು ಅದಕ್ಕೆ ಕಾಂಗ್ರೆಸ್ ಪಕ್ಷದ ಬಿ.ಎಲ್.ಎ ೨ಗಳು ಯಾವ ರೀತಿ ಜಾಗೃತಿಯಿಂದ ಕೆಲಸ ಮಾಡಬೇಕು ಎಂಬುದರ ಬಗ್ಗೆ ಕರ್ನಾಟಕ ಜಾಗೃತಿ ಸಮಿತಿಯ ನಿರ್ದೇಶಕ ಮೋಹನ್ ಮಾಹಿತಿ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ಎಸ್.ಐ.ಆರ್. ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ಪಕ್ಷದ ಬಿ.ಎಲ್.ಎಗಳು ಅತ್ಯಂತ ಕ್ರಿಯಾತ್ಮಕವಾಗಿ ಜವಾಬ್ದಾರಿ ನಿಭಾಯಿಸುವಂತೆ ಸೂಚನೆ ನೀಡಿದರು.
ಎಸ್.ಐ.ಆರ್. ಕಾರ್ಯಕ್ರಮದ ಮೈಸೂರು - ಕೊಡಗು ವಿಭಾಗದ ಕಾಂಗ್ರೆಸ್ ಉಸ್ತುವಾರಿಗಳಾದ ಎಂ. ಲಕ್ಷಣ್ ಎಸ್.ಐ.ಆರ್. ಕಾರ್ಯಕ್ರಮ ಸಂಬAಧ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಜಾಗೃತರಾಗಿ ಇರಬೇಕು ಎಂದು ಕರೆ ನೀಡಿದರು.
ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೊಕ್ಕಲೆರ ಸುಜು ತಿಮ್ಮಯ್ಯ, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ಹಂಸ, ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ, ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಸೇರಿದಂತೆ ೬೮ ಬೂತ್ಗಳ ಬಿ.ಎಲ್.ಎ ೨ ಮತ್ತು ಮುಖಂಡರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.