ಮಡಿಕೇರಿ, ಜೂ. ೨೬: ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆ ವತಿಯಿಂದ ಜುಲೈ ೧ ರಿಂದ ೬ ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ಸಹಕಾರ ತರಬೇತಿಯನ್ನು ಪ್ರಾರಂಭಿಸುತ್ತಿದೆ.

ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಯ ಪಿರಿಯಪಟ್ಟಣ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕುಗಳು ಈ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವುದರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ; ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ತರಬೇತಿ ಪಡೆಯಲು ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು; ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ಸಾಮಾನ್ಯ ಅಭ್ಯರ್ಥಿಗಳಿಗೆ ರೂ.೫೦೦ ಶಿಷ್ಯವೇತನ ಮತ್ತು ವಿಶೇಷ ನಿರುದ್ಯೋಗ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.೬೦೦ ಶಿಷ್ಯವೇತನ ನೀಡಲಾಗುವುದು ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ವ್ಯವಸ್ಥೆ ಇರುತ್ತದೆ; ಅರ್ಜಿ ಸಲ್ಲಿಸಲು ಕೊನೆಯ ಇದೇ ತಾ. ೩೦ ಆಗಿರುತ್ತದೆ.

ಅರ್ಜಿಗಳನ್ನು ಪ್ರಾಂಶುಪಾಲರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮುತ್ತಪ್ಪ ದೇವಸ್ಥಾನದ ಹತ್ತಿರ, ಅಬ್ಬಿಫಾಲ್ಸ್ ರಸ್ತೆ, ಮಡಿಕೇರಿ -೫೭೧೨೦೧, ದೂರವಾಣಿ ಸಂಖ್ಯೆ: ೯೯೦೨೧೮೯೮೭೨. ಮುಖ್ಯಕಾರ್ಯನಿರ್ವಹಣಾಧಿಕಾರಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ನಿ., ಪೆನ್ಷನ್‌ಲೇನ್, ನಗರಸಭೆ ಹಿಂಭಾಗ ರಸ್ತೆ, ಮಡಿಕೇರಿ-೫೭೧೨೦೧, ದೂರವಾಣಿ ಸಂಖ್ಯೆ: ೮೦೭೩೭೯೩೬೬೯ ಮುಖ್ಯಕಾರ್ಯನಿರ್ವಹಣಾಧಿಕಾರಿ, ಹಾಸನ ಜಿಲ್ಲಾ ಸಹಕಾರ ಯೂನಿಯನ್, ನಿ., ಹಳೇ ಬಸ್ ನಿಲ್ದಾಣದ ಹತ್ತಿರ, ಹಾಸನ-೫೭೩೨೦೧, ದೂರವಾಣಿ ಸಂಖ್ಯೆ: ೯೮೪೫೨೫೩೬೩೯ ಇಲ್ಲಿಂದ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: ೯೬೬೩೧೫೩೯೨೨, ೮೭೬೨೯೨೫೮೬೨, ೮೭೬೨೧೧೦೯೫೨ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.