ಮಡಿಕೇರಿ, ಜೂ. ೨೬: ಸೂಕ್ಷö್ಮ ಪರಿಸರ ವಲಯವಾಗಿರುವ ಕೊಡಗಿನಲ್ಲಿ ಪರಿಸರ ನಾಶಕ್ಕೆ ಅವಕಾಶ ನೀಡಬಾರದು ಎಂದು ಕೊಡವಾಮೆರ ಕೊಂಡಾಟ ಸಂಘಟನೆ ಆಗ್ರಹಿಸಿದೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಾಮೆರ ದಿನೇಶ್ ಬೆಳ್ಯಪ್ಪ, ಕೊಡಗು ತನ್ನ ಪರಿಸರಕ್ಕೆ ಹೆಸರುವಾಸಿಯಾಗಿದ್ದು, ಇಲ್ಲಿನ ಪರಿಸರಕ್ಕೆ ಧಕ್ಕೆಯಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಮಲ್ಮಬೆಟ್ಟ ಸಮೀಪ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು, ಖಂಡನೀಯ. ಇದೀಗ ವಿರೋಧ ತಿಳಿದು ಹಿಂಪಡೆದಿರುವುದು ಸ್ವಾಗತಾರ್ಹ. ಮುಂದೆಯೂ ಕೂಡ ಕೊಡಗಿನ ಪರಿಸರ ನಾಶಕ್ಕೆ ಕಾರಣವಾಗುವ ಯೋಜನೆಗೆ ಜಿಲ್ಲಾಡಳಿತ ಅವಕಾಶ ನೀಡಬಾರದು. ಕೊಡಗಿನಲ್ಲಿ ಯಾವುದೇ ಬೃಹತ್ ಕಟ್ಟಡಗಳು ಮತ್ತು ಅಕ್ರಮ ಯೋಜನೆಗಳಿಗೆ ಅವಕಾಶ ನೀಡಬಾರದು. ನಡೆಯುತ್ತಿರುವ ಅಕ್ರಮಗಳಿಗೆ ತಕ್ಷಣ ತಡೆ ನೀಡಿ ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಅಕ್ರಮ ಚಟುವಟಿಕೆಯ ವಿರುದ್ಧ ಚೆನ್ನೆöÊನಲ್ಲಿರುವ ರಾಷ್ಟಿçÃಯ ಹಸಿರು ನ್ಯಾಯಾಧೀಕರಣಕ್ಕೆ ಸಂಘಟನೆ ವತಿಯಿಂದ ದೂರು ಅರ್ಜಿ ಸಲ್ಲಿಸಲಾಗಿದೆ. ಅವ್ಯಾಹತವಾಗಿ ನಡೆಯುತ್ತಿರುವ ಪರಿಸರ ನಾಶ ತಡೆಯಲು ನ್ಯಾಯಾಧೀಕರಣ ಮಧ್ಯಪ್ರವೇಶಿಸಿ ಕ್ರಮಕೈಗೊಳ್ಳುವ ವಿಶ್ವಾಸವಿದೆ ಎಂದು ತಿಳಿಸಿದರು. ಗೋಷ್ಠಿಯಲ್ಲಿ ಕಾರ್ಯದರ್ಶಿ ಕುಂಞÂರ ಗಿರೀಶ್ ಭೀಮಯ್ಯ, ಸಂಘಟನಾ ಕಾರ್ಯದರ್ಶಿ ತೀತಿಮಾಡ ಸೋಮಣ್ಣ, ನಿರ್ದೇಶಕ ಅಜ್ಜಮಕ್ಕಡ ವಿನು ಕುಶಾಲಪ್ಪ ಹಾಜರಿದ್ದರು.