ವೀರಾಜಪೇಟೆ, ಜೂ. ೨೬: ತಾಲೂಕಿನ ಹೆಗ್ಗಳ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಮಾಹಿತಿ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು ಸೇರಿ ಶಾಲಾ ಆವರಣದಲ್ಲಿ ಗಿಡ ನೆಟ್ಟರು. ವಲಯ ಅರಣ್ಯಾಧಿಕಾರಿ ನಂದೀಶ್ ಮಾತನಾಡಿ, ನೀರನ್ನು ಮಿತವಾಗಿ ಬಳಸಿ, ಹೆಚ್ಚು ಗಿಡ ನೆಟ್ಟು, ಸಾವಯವ ಗೊಬ್ಬರ ಬಳಸಬೇಕೆಂದರು. ವಿದ್ಯಾರ್ಥಿಗಳಿಗೆ ಪ್ರಬಂಧ, ಚಿತ್ರಕಲೆ, ಎಲೆ ಗುರುತಿಸುವ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು.

ಇದೇ ವೇಳೆ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಶೌರ್ಯ ತಂಡದ ಜಯಪ್ರಕಾಶ್ ಮಕ್ಕಳಿಗೆ ಯೋಗಾಸನ ಮಾಡಿಸಿದರು. ಕಾರ್ಯಕ್ರಮದಲ್ಲಿ ವಲಯ ಅರಣ್ಯಾಧಿಕಾರಿ ಲೋಕೇಶ್, ಮುಖ್ಯ ಶಿಕ್ಷಕಿ ಸುಜಾತ, ಕೃಷಿ ಮೇಲ್ವಿಚಾರಕ ವಸಂತ್, ರೋಹಿಣಿ, ಉಪಾಧ್ಯಕ್ಷ ಜಗದೀಶ್ ಹಾಜರಿದ್ದರು.