ಕುಶಾಲನಗರ, ಜೂ. ೨೬: ರೋಟರಿ ಸಂಸ್ಥೆ ಸಾಮಾಜಿಕ ಸೇವಾ ಕಾರ್ಯದೊಂದಿಗೆ ಸಮಾಜ ಸೇವೆಯಲ್ಲಿ ಮಾದರಿಯಾಗಿದೆ ಎಂದು ಹಿರಿಯ ರೋಟರಿ ಸದಸ್ಯ ಎಸ್.ಕೆ. ಸತೀಶ್ ಹೇಳಿದರು.

ಸಮೀಪದ ಅತ್ತೂರು ಖಾಸಗಿ ರೆಸಾರ್ಟ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಕುಶಾಲನಗರ ರೋಟರಿ ಸಂಸ್ಥೆ ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡು ೨೦೨೬-೨೭ನೇ ಸಾಲಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿ ಅವರು ಮಾತನಾಡಿದರು.

ರೋಟರಿ ಸಂಸ್ಥೆ ಸಮಾಜ ಸೇವೆಯಲ್ಲಿ ಅಂತರರಾಷ್ಟಿçÃಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಹೆಚ್ಚಿನ ಸದಸ್ಯರು ರೋಟರಿ ಸದಸ್ಯತ್ವವನ್ನು ಪಡೆದು ಸಾಮಾಜಿಕ ಸೇವಾ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಜೀವನದಲ್ಲಿ ಸಂತೋಷ, ಸ್ವಯಂತೃಪ್ತಿಯನ್ನು ಹೊಂದಬೇಕು ಎಂದರು.

ರೋಟರಿ ಸಂಸ್ಥೆ ಈ ಸಾಲಿನಲ್ಲಿ ಕ್ಷೇತ್ರ ಶಾಸಕರ ಅನುದಾನ ಸೇರಿದಂತೆ ಸದಸ್ಯರ ಹಾಗೂ ದಾನಿಗಳ ಸಹಕಾರದಿಂದ ಸುಮಾರು ರೂ. ೮೦ ಲಕ್ಷ ವೆಚ್ಚದಲ್ಲಿ ಕುಶಾಲನಗರ ಪಟ್ಟಣ ಮತ್ತು ಸುತ್ತಮುತ್ತ ವಿವಿಧ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಿದೆ. ಭುವನಗಿರಿ ಗ್ರಾಮದಲ್ಲಿರುವ ಕಸ ಸಂಗ್ರಹ ಕೇಂದ್ರದಲ್ಲಿ ರೋಟರಿ ಸಂಸ್ಥೆ ಹಸಿಕಸವನ್ನು ಗೊಬ್ಬರವಾಗಿ ಪರಿವರ್ತಿಸುವ ಹಸಿಕಸ ನಿರ್ವಹಣಾ ಘಟಕ ಸ್ಥಾಪನೆ ಮಾಡಿದ್ದು, ಎಸ್.ಎಲ್.ಎನ್. ಸಂಸ್ಥೆ ಸಿಎಸ್‌ಆರ್ ಫಂಡ್‌ನಿAದ ರೂ. ೧೫ ಲಕ್ಷ ನೀಡಿದೆ ಎಂದು ಹೇಳಿದರು.

ಕುಶಾಲನಗರದ ಎರಡು ಶತಮಾನಗಳನ್ನು ಕಾಣುತ್ತಿರುವ ಕಾವೇರಿ ಸೇತುವೆ ಮೇಲೆ ಸುಂದರ ಉದ್ಯಾನವನ ನಿರ್ಮಾಣ ಮಾಡಲಾಗಿದೆ. ಪಟ್ಟಣ ಸೇರಿದಂತೆ ಪ್ರಮುಖ ಪ್ರವಾಸಿ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಹಾಗೂ ಕಸ ಸಂಗ್ರಹಕ್ಕಾಗಿ ಬಾಟಲ್ ಮಾದರಿಯ ಕಸದ ತೊಟ್ಟಿಯನ್ನು ಅಳವಡಿಸಲಾಗಿದೆ ಎಂದರು.

ಕಳೆದ ಸಾಲಿನ ಅಧ್ಯಕ್ಷ ಮನುಪೆಮ್ಮಯ್ಯ ಹಾಗೂ ಕಾರ್ಯದರ್ಶಿ ಮಂಜುನಾಥ್ ಅವರ ಸೇವೆ ಶ್ಲಾಘನೀಯ ಎಂದರು. ನೂತನ ಸಹಾಯಕ ಗೌವರ್ನರ್ ಎಂ.ಡಿ. ರಂಗಸ್ವಾಮಿ ಮಾತನಾಡಿ, ಪ್ರತಿಯೊಬ್ಬರೂ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಲು ರೋಟರಿ ಉತ್ತಮ ವೇದಿಕೆಯಾಗಿದೆ. ರೋಟರಿ ವತಿಯಿಂದ ಹಮ್ಮಿಕೊಳ್ಳುವ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಹಕಾರ ನೀಡಬೇಕು ಎಂದರು.

ನಿರ್ಗಮಿತ ಅಧ್ಯಕ್ಷ ಮನು ಪೆಮ್ಮಯ್ಯ ಮಾತನಾಡಿ, ರೋಟರಿ ಸಂಸ್ಥೆ ಮೂಲಕ ಜನಮಾನಸದಲ್ಲಿ ಉಳಿಯುವಂತೆ ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಂಡ ಬಗ್ಗೆ ಮಾಹಿತಿ ಒದಗಿಸಿದರು. ವಲಯ ಸೇನಾನಿ ಲಲಿತಾ ರಾಘವನ್, ರಾಕೇಶ್ ಪಟೇಲ್ ಮಾತನಾಡಿದರು. ಈ ಸಂದರ್ಭ ಮಾಜಿ ಸಹಾಯಕ ಗೌವರ್ನರ್ ಉಲ್ಲಾಸ್ ಕೃಷ್ಣ, ಮಾಜಿ ಕಾರ್ಯದರ್ಶಿ ಹೆಚ್.ಪಿ. ಮಂಜುನಾಥ್ ಉಪಸ್ಥಿತರಿದ್ದರು.

ಅಧಿಕಾರ ಸ್ವೀಕಾರ : ರೋಟರಿ ಸಂಸ್ಥೆ ನೂತನ ಅಧ್ಯಕ್ಷರಾಗಿ ಸಿ.ಎ. ರುದ್ರೇಶ್ ಪಟೇಲ್, ನೂತನ ಕಾರ್ಯದರ್ಶಿಯಾಗಿ ಎಂ.ಯು. ಅರುಣ್ ಅಧಿಕಾರ ವಹಿಸಿಕೊಂಡರು. ಮತ್ತು ನೂತನ ತಂಡದ ಸದಸ್ಯರಿಗೆ ಪ್ರಮಾಣವಚನ ಬೋಧಿಸಲಾಯಿತು. ನಿಕಟಪೂರ್ವ ಅಧ್ಯಕ್ಷ ಮನು ಪೆಮ್ಮಯ್ಯ, ನಿಕಟಪೂರ್ವ ಕಾರ್ಯದರ್ಶಿ ಮಂಜುನಾಥ್ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು.ಕುಶಾಲನಗರ ಪಟ್ಟಣ ಸುತ್ತಮುತ್ತ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಂಕ ಪಡೆದು ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.