ಸಿದ್ದಾಪುರ, ಜೂ. ೨೬: ಉತ್ತಮವಾಗಿ ಕಾರ್ಯ ನಿರ್ವಹಿಸಿ ಸಾಧನೆ ಮಾಡಿರುವ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟಗಳ ಸ್ವಸಹಾಯ ಗುಂಪುಗಳಿಗೆ ಸರ್ಕಾರದ ವತಿಯಿಂದ ನೀಡುವ ಪ್ರಶಸ್ತಿಗೆ ಸಿದ್ದಾಪುರದ ಸಂಜೀವಿನಿ ಒಕ್ಕೂಟ ಭಾಜನವಾಗಿದೆ.

ಸರ್ಕಾರ ಒಕ್ಕೂಟಕ್ಕೆ ಉಚಿತ ವಾಗಿ ಸಂಚರಿಸಲು ಒಂದು ಕಾರು ಹಾಗೂ ನಗದು ರೂ. ೧ ಲಕ್ಷವನ್ನು ನೀಡಿ ಗೌರವಿಸಿದೆ. ಇದನ್ನು ವೀರಾಜಪೇಟೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಾಜೇಶ್ ಅವರು ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭ ಸಂಜೀವಿನಿ ಒಕ್ಕೂಟದ ಪ್ರಮುಖರಾದ ಎಂ.ಎ. ಯಮುನಾ, ಸುಮತಿ, ತುಳಸಿ, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.