ಸುಂಟಿಕೊಪ್ಪ, ಜೂ. ೨೭: ನಾಲ್ಕು ವಾಹನಗಳ ನಡುವೆ ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಸುಂಟಿಕೊಪ್ಪದ ರಾಷ್ಟಿçÃಯ ಹೆದ್ದಾರಿಯ ಕೊಡಗರಹಳ್ಳಿ ಬಿರ್ಚಿವುಡ್ ರೆಸಾರ್ಟ್ ಸಮೀಪದ ತಿರುವಿನಲ್ಲಿ ತಾ. ೨೬ರಂದು ಕುಶಾಲನಗರ ಕಡೆಯಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಕಾರು ಮತ್ತು ಮಡಿಕೇರಿಯಿಂದ ಕುಶಾಲನಗರದತ್ತ ತೆರಳುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್ನಲ್ಲಿದ್ದ ದಂಪತಿ ಹಾಗೂ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದೇ ಸ್ಥಳದಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು ಹುಂಡೈ ಕಾರು ಹಾಗೂ ಜಿಪ್ಸಿ ವಾಹನಗಳ ನಡುವೆ ಅಪಘಾಥ ಸಂಭವಿಸಿ ಜಿಪ್ಸಿ ವಾಹನವು ರಸ್ತೆ ಬದಿಯಲ್ಲಿ ಮಗುಚಿಕೊಂಡಿದ್ದು ಎರಡೂ ವಾಹನಗಳ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಯಾವುದೇ ಪ್ರಕರಣ ದಾಖಲಾಗಿಲ್ಲ.