ಮಡಿಕೇರಿ, ಜೂ. ೨೭: ವೀರಾಜಪೇಟೆ ಪುರಸಭೆ ವ್ಯಾಪ್ತಿಯ ಕೀರ್ತಿ ಬಡಾವಣೆಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭೇಟಿ ನೀಡಿ ರೂ. ೨೦ ಲಕ್ಷ ಅನುದಾನದಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ನೆರವೇರಿಸಿದರು.
ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಮಾಜಿ ಸದಸ್ಯರಾದ ರಾಜೇಶ್ ಪದ್ಮನಾಭ, ಶಬರೀಷ್, ರಜಿನಿಕಾಂತ್, ಜಲೀಲ್, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ತಾಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ರಫೀಕ್, ಚೆಕು, ಕುಂಡಚ್ಚಿರ ಮಂಜು ದೇವಯ್ಯ, ಬಟ್ಟಕಾಳಂಡ ರಾಜ, ಮಂಜುನಾಥ್, ಅನಿಲ್, ಅಯೂಬ್, ಪುರಸಭೆ ಮುಖ್ಯಾಧಿಕಾರಿ ನಾಚಪ್ಪ, ಸ್ಥಳೀಯ ಪ್ರಮುಖರು ಮತ್ತಿತರರು ಉಪಸ್ಥಿತರಿದ್ದರು.