ವೀರಾಜಪೇಟೆ : ವೀರಾಜಪೇಟೆ ಮೀನ್‌ಪೇಟೆಯಲ್ಲಿರುವ ವಿನಾಯಕ್ ಇಂಗ್ಲೀಷ್ ಸ್ಕೂಲ್‌ನಲ್ಲಿ ಅಂತರರಾಷ್ಟಿçÃಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥೆ ಜಯಕುಮಾರಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಯೋಗದ ಮಹತ್ವದ ಕುರಿತು ಮಾತನಾಡಿದ ಶಾಲೆಯ ಶಿಕ್ಷಕಿ ಭವ್ಯ ಪಿ.ಎ, ಪ್ರತಿ ವರ್ಷ ಜೂನ್ ೨೧ ರಂದು ವಿಶ್ವ ಯೋಗ ದಿನವನ್ನು ಆಚರಿಸಲಾಗುತ್ತದೆ. ಯೋಗವು ಭಾರತದ ಪ್ರಾಚೀನ ಪರಂಪರೆಯಾಗಿದ್ದು, ದೇಹ ಮತ್ತು ಮನಸ್ಸಿನ ಆರೋಗ್ಯ ಕಾಪಾಡುವ ಅತ್ಯುತ್ತಮ ವಿಧಾನವಾಗಿದೆ. ಇಂದಿನ ಒತ್ತಡದ ಜೀವನದಲ್ಲಿ ಯೋಗದಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ನಿಯಮಿತ ಯೋಗ ಅಭ್ಯಾಸದಿಂದ ಆತ್ಮವಿಶ್ವಾಸ, ಏಕಾಗ್ರತೆ ಹಾಗೂ ನೆನಪಿನ ಶಕ್ತಿ ಹೆಚ್ಚಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸಾಮೂಹಿಕ ಯೋಗಾಭ್ಯಾಸ ನಡೆಯಿತು. ಪ್ರಾಣಾಯಾಮ, ಧ್ಯಾನ ಹಾಗೂ ವಿವಿಧ ಯೋಗಾಸನಗಳನ್ನು ಮಕ್ಕಳು ಅಭ್ಯಾಸ ಮಾಡಿದರು. ವಿದ್ಯಾರ್ಥಿನಿ ನಮಿತಾ ಮತ್ತು ತಂಡದವರು ಯೋಗದ ಮಹತ್ವವನ್ನು ನೃತ್ಯದ ಮೂಲಕ ಪ್ರದರ್ಶಿಸಿ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಮುಖ್ಯಸ್ಥೆ ಜಯಕುಮಾರಿ, ಮುಖ್ಯ ಶಿಕ್ಷಕಿಯರಾದ ಅರ್ಪಿತ ಎನ್.ಎಂ ಹಾಗೂ ದಿವ್ಯ ಟಿ.ಟಿ ಉಪಸ್ಥಿತರಿದ್ದರು.

ಶಿಕ್ಷಕಿ ರಮ್ಯಾ ವಿ.ಟಿ, ಶಿಕ್ಷಕಿ ಎಚ್.ಎ ಸೌಮ್ಯ, ದಿವ್ಯ ಕೆ.ಎಸ್ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮಡಿಕೇರಿ : ಕುಶಾಲನಗರ ಸಮೀಪದ ಜ್ಞಾನಗಂಗಾ ವಸತಿ ಶಾಲೆಯಲ್ಲಿ ಅಂತರ ರಾಷ್ಟಿçÃಯ ಯೋಗ ದಿನ ಆಯೋಜಿಸಲಾಗಿತ್ತು.

ಸೋಮವಾರಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಜ್ಯೋತಿ ಬೆಳಗಿಸಿ ಯೋಗದಿನವನ್ನು ಉದ್ಘಾಟಿಸಿದರು.

ವಿದ್ಯಾರ್ಥಿಗಳು ದೈಹಿಕ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಬೇಕು. ದೈಹಿಕ ಆರೋಗ್ಯ ಸದೃಢವಾಗಿಬೇಕಾದರೆ ದಿನನಿತ್ಯ ಯೋಗಾಭ್ಯಾಸ ಮಾಡುವುದನ್ನು ರೂಢಿಸಿಕೊಳ್ಳಿ ಎಂದು ಕೃಷ್ಣಪ್ಪ ಕರೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿ ಡಾ. ಶಶಾಂಕ್ ಅತ್ವಾರ್ ಮಾತನಾಡಿ, ಯೋಗದ ಮಹತ್ವ, ಯೋಗದ ಉಗಮದ ಬಗ್ಗೆ ಮಾಹಿತಿ ನೀಡಿದರಲ್ಲದೆ ಗುರು ಪರಂಪರೆಯ ಬಗ್ಗೆಯೂ ತಿಳಿಸಿದರು. ವಿದ್ಯಾರ್ಥಿಗಳು ಶಿಸ್ತು, ಸಂಯಮ ಸಮಯ ಪಾಲನೆಯನ್ನು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆಡಳಿತ ಮಂಡಳಿಯ ಅಧ್ಯಕ್ಷ ಟಿ.ಕೆ ಸುಧೀರ್ ಮಾತನಾಡಿ, ಪ್ರಾಣಾಯಾಮ ಮತ್ತು ಸೂರ್ಯ ನಮಸ್ಕಾರವನ್ನು ದಿನನಿತ್ಯ ಮಾಡುವುದರಿಂದ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಹೇಳಿದರು.

ಯೋಗ ದಿನದ ಅಂಗವಾಗಿ ಶಾಲೆಯ ಯೋಗ ಶಿಕ್ಷಕ ಶಿವರಾಮ ಯೋಗಾಭ್ಯಾಸ ಮಾಡಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಬಿ.ಎಸ್. ನಿಂಗಪ್ಪ, ಪ್ರಾಯವಾಲ ಸತ್ಯಸುಲೋಚನ, ಶಿಕ್ಷಕ ಶಿಕ್ಷಕೇತರು ಉಪಸ್ಥಿತರಿದ್ದರು.ಮಡಿಕೇರಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸರಕಾರಿ ಅಭಿಯೋಜನಾ ಇಲಾಖೆ, ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ಯೋಗ ದಿನಾಚರಣೆ ನಡೆಯಿತು. ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ರಭಾರ ಅಧ್ಯಕ್ಷರಾದ ಸಿ.ಕೆ. ಬಸವರಾಜ್ ಅವರು ಕಾರ್ಯಕ್ರಮ ಉದ್ಘಾಟಿಸಿ. ದಿನನಿತ್ಯ ಒತ್ತಡದ ಬದುಕಿನಲ್ಲಿರುವ ನಮಗೆ ಯೋಗ ಅವಶ್ಯಕವಾಗಿದೆ ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ಮಾತನಾಡಿ, ಒತ್ತಡ, ಕೋಪ ನಿಗ್ರಹಕ್ಕೆ ಯೋಗ ಅತ್ಯವಶ್ಯಕ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷ ಸಿ.ಟಿ. ಜೋಸೆಫ್ ಯೋಗವು ವಿಶ್ವಕ್ಕೆ ಭಾರತ ನೀಡಿದ ಕೊಡುಗೆ ಎಂದರು. ವೇದಿಕೆಯಲ್ಲಿ ೩ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸುರೇಂದ್ರ ಜಿ. ಅಪರ ಸಿವಿಲ್ ನ್ಯಾಯಾಧೀಶರು ಜೆ.ಎಂ.ಎಫ್.ಸಿ. ಯಶಸ್ವಿನಿ ಅಮೀನ್, ಸರ್ಕಾರಿ ಸಹಾಯಕ ಅಭಿಯೋಜಕರಾದ ರಘು, ಪ್ರಭಾರ ಮುಖ್ಯ ಆಡಳಿತಾಧಿಕಾರಿಗಳಾದ ಎಸ್.ಟಿ. ಶಮ್ಮಿ ಇದ್ದರು.

ಆಯುಷ್ ಇಲಾಖೆಯ ಯೋಗ ತರಬೇತುದಾರರಾದ ಕೌಶಿಕ್ ಮತ್ತು ದೇವೇಂದ್ರ ಮಾರ್ಗದರ್ಶನದಲ್ಲಿ ಯೋಗಾಭ್ಯಾಸ ನಡೆಯಿತು. ಜಿ.ಕಾ.ಸೇ.ಪ್ರಾ.ದ ಆಡಳಿತ ಸಹಾಯಕರಾದ ಜಯಪ್ಪ ಸ್ವಾಗತಿಸಿ, ನಿರೂಪಿಸಿ ವಂದಿಸಿದರು.ಮಡಿಕೇರಿ : ಎನ್‌ಸಿಸಿಯ ೧೯ನೇ ಕರ್ನಾಟಕ ಬೆಟಾಲಿಯನ್ ವತಿಯಿಂದ ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಇಲ್ಲಿನ ಕೋಟೆ ಆವರಣದಲ್ಲಿ ಯೋಗ ಪ್ರದರ್ಶನ ನಡೆಯಿತು.

ಸುಮಾರು ೨೦೦ಕ್ಕೂ ಅಧಿಕ ಮಂದಿ ಕೆಡೆಟ್‌ಗಳು ಇದರಲ್ಲಿ ಭಾಗಿಯಾದರು.

ಮಡಿಕೇರಿಯ ಎಫ್‌ಎಂಕೆಎAಸಿ ಕಾಲೇಜು, ಕೊಡಗು ವಿದ್ಯಾಲಯ, ಜನರಲ್ ತಿಮ್ಮಯ್ಯ ಶಾಲೆ, ಸಂತ ಮೈಕಲರ ಶಾಲೆ, ಸಂತ ಜೋಸೆಫರ ಶಾಲೆ, ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ನವೋದಯ ವಿದ್ಯಾಲಯದ ವಿದ್ಯಾರ್ಥಿಗಳು ಇದ್ದರು.

ಬೆಟಾಲಿಯನ್ ಕಮಾಂಡರ್ ಕರ್ನಲ್ ರೆಜಿತ್ ಮುಕುಂದನ್ ನೇತೃತ್ವ ವಹಿಸಿದ್ದರು.

ಲೆಫ್ಟಿನೆಂಟ್ ಕರ್ನಲ್ ಶ್ರೀನಿವಾಸನ್, ಸುಬೇದಾರ್ ಮೇಜರ್ ಪಿ. ಶಿಜು, ಶಾಲಾ ಎನ್‌ಸಿಸಿ ಅಧಿಕಾರಿಗಳಾದ ದಾಮೋದರ್, ಚಂದ್ರಿಕಾ, ಈರಪ್ಪ ಹಾಗೂ ರೀನಾ ಭಾಗವಹಿಸಿದ್ದರು.ಸುಂಟಿಕೊಪ್ಪ : ಅಂತರರಾಷ್ಟಿçÃಯ ಯೋಗ ದಿನಾಚರಣೆ ಅಂಗವಾಗಿ ಸುಂಟಿಕೊಪ್ಪ ರಾಮ ಮಂದಿರದಲ್ಲಿ ಯೋಗ ದಿನವನ್ನು ನಡೆಸಲಾಯಿತು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ವೈದ್ಯಕೀಯ ಶಿಕ್ಷಣ ಸಂಸ್ಥೆ ಪಕೃತಿ ಚಿಕಿತ್ಸಕ ಮತ್ತು ಸಲಹೆಗಾರರಾದ ಡಾ. ಪಿ.ಜಿ. ಅರುಣ್ ಕುಮಾರ್ ಅವರು, ಯೋಗದ ಪರಿಪೂರ್ಣ ಅರ್ಥದ ಬಗ್ಗೆ ವಿವರಿಸಿದರಲ್ಲದೆ ಅದರ ಪ್ರಾಯೋಜನಗಳು ಮತ್ತು ಪ್ರತಿದಿನದ ಅನುಷ್ಠಾನ ವಿಧಾನಗಳನ್ನು ವಿವರಿಸಿದರು.

ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿ ಅವರು ೪೫ ನಿಮಿಷಗಳ ಕಾಲ ಯೋಗದ ಮೂಲ ಶಾಂತ ಮತ್ತು ಅನುಶಾಸನಾತ್ಮಕ ತತ್ವಗಳ ಮೇಲೆ ಗಮನವನ್ನು ಕೇಂದ್ರಿಕೃತಗೊಳಿಸಿ ಜನರಿಗೆ ಯೋಗಭ್ಯಾಗಸದ ಬಗ್ಗೆ ಮಾಹಿತಿ ನೀಡಿದರು.

ವೈದ್ಯರಾದ ಪಾರ್ವತಿ ಅವರು ಮಾತನಾಡಿ, ಆಧುನಿಕ ವಿಜ್ಞಾನ ಮತ್ತು ನಮ್ಮ ಪ್ರಾಚೀನ ಯೋಗ ಪದ್ಧತಿಯ ಸಮ್ಮಿಲನದ ಮಾರ್ಗವನ್ನು ವಿವರಿಸಿದರು.

ಯೋಗ ಶಿಕ್ಷಕ ರಾಜು ದಿನದ ಮಹತ್ವದ ಕುರಿತು ಮಾತನಾಡಿದರು. ಇದೇ ವೇಳೆ ಕಳೆದ ಹಲವು ವರ್ಷಗಳಿಂದ ಯೋಗ ತರಬೇತಿ ನೀಡುತ್ತಿರುವ ವಿ.ಎ ಸಂತೋಷ್, ರಾಜು, ಕನಕ ಜ್ಯೋತಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಓಂ ಶಕ್ತಿ ಯೋಗ ಸಂಘದ ಮಹಿಳಾ ಸದಸ್ಯರು, ಮಕ್ಕಳು, ಹಿರಿಯರು ಯೋಗ ಸಮೂಹ ಪ್ರದರ್ಶನ ನೀಡಿದರು.

ಈ ಸಂದರ್ಭ ಪವಿತ್ರ, ಅಂಕಿತ, ತೃಷಲ್ ಸನ್ಮಾನ್, ಗಂಗೂಬಾಯ್, ಮಹಿಮ ಸತ್ಯ, ಮಂಗಳ ಕಾಮತ್, ಮನು ಅಚ್ಚಮಯ್ಯ, ರಾಕೇಶ್ ಹಾಗೂ ಇನ್ನಿತರರು ಇದ್ದರು.ನಾಪೋಕ್ಲು : ಇಲ್ಲಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೧೨ನೇ ಅಂತರರಾಷ್ಟಿçÃಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಪ್ರೊ ಕಲ್ಯಾಟಂಡ ಪೂಣಚ್ಚ ಮಾತನಾಡಿ, ಯೋಗಕ್ಕೆ ೫,೦೦೦ ವರ್ಷಗಳ ಇತಿಹಾಸವಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗ ಅಗತ್ಯ. ಯೋಗಭ್ಯಾಸದಿಂದ ಒಬ್ಬ ವ್ಯಕ್ತಿ ಶಾರೀರಿಕ ದೃಢತೆ ಮತ್ತು ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳುತ್ತಾನೆ ಎಂದರು.

ಶಾಲೆಯ ಪ್ರಾಂಶುಪಾಲ ರಾದ ಬಿ.ಎಂ ಶಾರದ ಮಾತನಾಡಿ, ದೈಹಿಕ ಆರೋಗ್ಯದಲ್ಲಿ ಯೋಗಾಸನವು ಹೆಚ್ಚು ಪರಿಣಾಮ ಬೀರುತ್ತದೆ. ಭಾರತೀಯ ಪ್ರಾಚೀನ ಶಿಕ್ಷಣದಲ್ಲಿ ಒಂದಾದ ಯೋಗವನ್ನು ಇಡೀ ವಿಶ್ವವೇ ಸ್ವೀಕರಿಸಿ ಜೂನ್ ೨೧ ರಂದು ವಿಶ್ವ ಯೋಗ ದಿನಾಚರಣೆಯನ್ನಾಗಿ ಆಚರಿಸುತ್ತಿದೆ. ಬದಲಾದ ಜೀವನ ಶೈಲಿಯಲ್ಲಿ ಯುವ ಪೀಳಿಗೆಗೆ ಯೋಗ, ಧ್ಯಾನ ಮತ್ತು ಪ್ರಾಣಾಯಾಮದಂತಹ ನಿತ್ಯ ಅಭ್ಯಾಸ ಅತಿ ಅಗತ್ಯವಾಗಿದೆ. ಸರಳ, ಸುಖೀ ಜೀವನಕ್ಕೆ ಯೋಗ ಸಹಕಾರಿ ಎಂದರು. ಶಾಲಾ ಇಂಟರಾಕ್ಟ್ ಕ್ಲಬ್ಬಿನ ಖಜಾಂಚಿ ಸಮಿತ ಬಿ.ಎಂ ಯೋಗ ದಿನದ ಮಹತ್ವದ ಕುರಿತು ಮಾತನಾಡಿದರು. ದೈಹಿಕ ಶಿಕ್ಷಣ ಶಿಕ್ಷಕಿ ಸರಿತಾ, ಶಿಕ್ಷಕ ವೃಂದದವರು ಉಪಸ್ಥಿತರಿದ್ದು ವಿದ್ಯಾರ್ಥಿಗಳು ವಿವಿಧ ಬಗೆಯ ಯೋಗಾಸನ ಭಂಗಿಗಳನ್ನು ಪ್ರದರ್ಶಿಸಿದರು.ಮಡಿಕೇರಿ : ಅಂತರರಾಷ್ಟಿçÃಯ ಯೋಗ ದಿನಾಚರಣೆಯ ಅಂಗವಾಗಿ ಕೊಡಗು ವಿದ್ಯಾಲಯದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮವು ಪ್ರಾಂಶುಪಾಲರಾದ ಕೆ.ಎಸ್ ಸುಮಿತ್ರಾ ಉಪಸ್ಥಿತಿಯಲ್ಲಿ ನಡೆಯಿತು. ಯೋಗ ಶಿಕ್ಷಕಿ ವಿದ್ಯಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿವಿಧ ಯೋಗಾಸನಗಳು, ಪ್ರಾಣಾಯಾಮಗಳು ಹಾಗೂ ಧ್ಯಾನಾಭ್ಯಾಸಗಳನ್ನು ಪ್ರದರ್ಶಿಸಿದರು.

ವಿದ್ಯಾರ್ಥಿಗಳಿಂದ ನಡೆದ ಯೋಗ ಪ್ರದರ್ಶನಗಳು ಗಮನ ಸೆಳೆದವು. ಈ ಸಂದರ್ಭ ಯೋಗದ ಮಹತ್ವ ಹಾಗೂ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಅದರ ಸಕಾರಾತ್ಮಕ ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ, ಯೋಗವನ್ನು ತಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳುವ ಸಂಕಲ್ಪ ಕೈಗೊಂಡರು.

ಗೋಣಿಕೊಪ್ಪ : ಗೋಣಿಕೊಪ್ಪ ಅತ್ತೂರು ನ್ಯಾಷನಲ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟಿçÃಯ ಯೋಗ ದಿನಾಚರಣೆ ನಡೆಯಿತು.

ಶಾಲೆಯ ಟ್ರಸ್ಟಿ ಅಯ್ಯಪ್ಪ ಅಚ್ಚಪ್ಪ ಅವರು ಯೋಗದ ಮಹತ್ವ ಹಾಗೂ ಆರೋಗ್ಯಕರ ಜೀವನದಲ್ಲಿ ಯೋಗದ ಪಾತ್ರ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.

ಪ್ರಾಂಶುಪಾಲರಾದ ಪುಷ್ಪ ಸುಬ್ಬಯ್ಯ ಅವರು ಯೋಗಾಸನ ಪ್ರದರ್ಶನದೊಂದಿಗೆ ಉತ್ತೇಜಿಸಿದರು. ಯೋಗ ಶಿಕ್ಷಕ ಯಶ್ಮ ತಿಮ್ಮಯ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಮಾಲಿನಿ ರಾಜೇಶ್ ವಿವಿಧ ಯೋಗಾಸನಗಳ ಭಂಗಿಗಳನ್ನು ಪ್ರದರ್ಶನ ಮಾಡಿದರು. ೯ನೇ ತರಗತಿಯ ವಿದ್ಯಾರ್ಥಿಗಳು ಕಾರ್ಯಕ್ರಮದ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿಕೊಂಡು, ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು.

ಮಡಿಕೇರಿ : ತಿತಿಮತಿಯ ಲ್ಯಾಂಪ್ಸ್ ಅಕಾಡೆಮಿ ಶಾಲೆಯಲ್ಲಿ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.

ಶಿಕ್ಷಕರ ಮಾರ್ಗದರ್ಶನ ದಲ್ಲಿ ವಿದ್ಯಾರ್ಥಿಗಳು ವೃಕ್ಷಾಸನ, ಭುಜಂಗಾಸನ, ವಜ್ರಾಸನ, ಪ್ರಾಣಾಯಾಮ ಹಾಗೂ ಸೂರ್ಯ ನಮಸ್ಕಾರ ಗಳು ನಡೆದವು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳುವ ಸಂಕಲ್ಪ ಮಾಡಿದರು.ಮಡಿಕೇರಿ : ಪೊನ್ನಂಪೇಟೆ ಸಾಯಿ ಶಂಕರ ಶಿಕ್ಷಣ ಮಹಾವಿದ್ಯಾಲಯದ ಬಿ.ಇಡಿ ಕಾಲೇಜಿನಲ್ಲಿ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಥಮ ಮತ್ತು ದ್ವಿತೀಯ ವರ್ಷದ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಂದ ಯೋಗ ಪ್ರದರ್ಶನ, ಯೋಗದ ನೃತ್ಯ, ಹಾಡು, ಕವನ ವಾಚನವನ್ನು ಮಾಡಲಾಯಿತು.

ಪ್ರಶಿಕ್ಷಣಾರ್ಥಿಗಳಿಗೆ ಯೋಗದಿಂದ ಆಗುವ ಪ್ರಯೋಜನಗಳನ್ನು ಮತ್ತು ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುವ ಬಗ್ಗೆ ಶ್ರೀ ರಾಮಕೃಷ್ಣ ಆಶ್ರಮದ ಯೋಗ ಗುರುಗಳಾದ ಅಮೃತ ರಾಕೇಶ್ ಅವರು ಮಾರ್ಗದರ್ಶನ ನೀಡಿದರು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅಮೃತ ರಾಕೇಶ್ ಅವರು ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಚಂದ್ರಿಕಾ ನಟರಾಜ್, ವಹಿಸಿದ್ದರು. ಕಾಲೇಜಿನ ಸಹಾಯಕ ಪ್ರಾಧ್ಯಾಪಕರುಗಳಾದ ಕುಶ ಎಸ್.ಟಿ, ಸಂತೋಷ ಜಿ.ಕೆ ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಬಿ.ಇಡಿ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಸುಧಾ ವಳ್ಳಿಯಮ್ಮ, ಸ್ವಾಗತವನ್ನು ವಸಂತ ಎ.ಎಸ್ ಮತ್ತು ವಂದನಾರ್ಪಣೆಯನ್ನು ಧನುಷ್ ಎಂ.ಟಿ ಅವರು ನೆರವೇರಿಸಿದರು.