ಮಡಿಕೇರಿ ಕೇಂದ್ರ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಕಾರ್ಡಿಯಾಲಜಿ ಯೂನಿಟ್ ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ ಎಂದು ಶಾಸಕ ಡಾ ಮಂತರ್ ಗೌಡ ಮಾಹಿತಿ ನೀಡಿದರು. ರಕ್ತದಾನ ಶಿಬಿರದ ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ರಕ್ತದಾನಿಗಳಿಗೆ ಪ್ರಮಾಣ ಪತ್ರ ವಿತರಿಸಿಅವರು ಮಾತನಾಡಿದರು.

ಮಾಧ್ಯಮ ಸ್ಪಂದನ ಮೂಲಕ ನಡೆಯುತ್ತಿರುವ ಸಮಾಜಮುಖಿ ಕೆಲಸಗಳಿಗೆ ತಾನು ಕೈಜೋಡಿಸುವುದಾಗಿ ಭರವಸೆ ನೀಡಿದ ಅವರು ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಭವನ ನಿರ್ಮಾಣಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭ ಮಾತನಾಡಿದ ಮಾಧ್ಯಮ ಸ್ಪಂದನ ಸಂಸ್ಥಾಪಕ ಅಜ್ಜಮಾಡ ರಮೇಶ್ ಕುಟ್ಟಪ್ಪ ಕೊಡಗು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ನಿಟ್ಟಿನಲ್ಲಿ ಶಾಸಕರು ಮುಖ್ಯಮಂತ್ರಿಗಳೊAದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಕೋರಿದರು. ಸೈರಸ್ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಟಿ ಪಿ ಜಿನೇಶ್ ಮಾತನಾಡಿ ತಮ್ಮ ಆಸ್ಪತ್ರೆ ಮೂಲಕ ಪತ್ರಕರ್ತರಿಗೆ ಚಿಕಿತ್ಸೆ ಸಂದರ್ಭ ರಿಯಾಯಿತಿ ಕಲ್ಪಿಸುವುದಾಗಿ ತಿಳಿಸಿದರು. ಆಸ್ಪತ್ರೆ ವತಿಯಿಂದ ಶಾಸಕರನ್ನು ಸನ್ಮಾನಿಸಲಾಯಿತು. ೪೨ ಬಾರಿ ರಕ್ತದಾನ ಮಾಡಿದ ಮಾಧ್ಯಮ ಸ್ಪಂದನದ ಸದಸ್ಯ ವಿ ವಿ ಅರುಣ್ ಕುಮಾರ್ ಅವರನ್ನು ಶಾಸಕರು ಅಭಿನಂದಿಸಿದರು.