ಗೋಣಿಕೊಪ್ಪಲು, ಜೂ. ೨೭: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ವೀರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಆಚರಿಸಿದರು.
ಗೃಹ ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪೊನ್ನಣ್ಣ, ಸೌಹಾರ್ದ ನಾಡು, ಸಮೃದ್ಧ ನಾಡಿಗಾಗಿ ಬೆಂಗಳೂರು ನಗರವನ್ನು ನಿರ್ಮಿಸಿದ ಕೆಂಪೇಗೌಡ ಅವರ ಜೀವನ ನಮಗೆಲ್ಲರಿಗೂ ಮಾದರಿಯಾಗಿದೆ ಎಂದರು.
ಈ ವೇಳೆ ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ಮಾಜಿ ಪುರಸಭಾ ಸದಸ್ಯ ರಾಜೇಶ್ ಪದ್ಮನಾಭ, ತಾಲೂಕು ಕೆ ಡಿ ಪಿ ಸದಸ್ಯ ರಫೀಕ್, ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್ ಚಂಗಪ್ಪ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಆಲಿರ ರಶೀದ್, ಪಕ್ಷದ ಮುಖಂಡರಾದ ಸೂರಜ್ ಹೊಸೂರು, ಅಜ್ಜಿಕುಟ್ಟಿರ ಗಿರೀಶ್, ಕುಂಡಚ್ಚಿರ ಮಂಜು ದೇವಯ್ಯ, ಬಟ್ಟಕಾಳಂಡ ರಾಜ ದಿನೇಶ್, ಕೆಟೊಳಿ ಮೋಹನ್ ರಾಜ್, ವರ್ಗಿಸ್, ವಿ.ಟಿ.ವಾಸು ಮುಂತಾದವರು ಉಪಸ್ಥಿತರಿದ್ದರು.