ಶ್ರೀಮಂಗಲ, ಜೂ. ೨೮: ಪೊನ್ನಂಪೇಟೆ ತಾಲೂಕು ಕೆ. ಬಾಡಗ ಗ್ರಾಮದಲ್ಲಿ ಶಾಸಕರ ವಿಶೇಷ ನಿಧಿ ರೂ. ೪೭ ಲಕ್ಷ ಅನುದಾನದಲ್ಲಿ ನಿರ್ಮಾಣವಾದ ತಾಯಿ ಭೂಮಿ ಪೈಸಾರಿ ಹಾಡಿ, ನಾಣಚ್ಚಿ ಗದ್ದೆ ಹಾಡಿ ಹಾಗೂ ಕೋಡಂಗೆ ಹಾಡಿ ಭಾಗದ ವಿವಿಧ ರಸ್ತೆ ಕಾಮಗಾರಿಗಳ ಉದ್ಘಾಟನೆಯನ್ನು ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಸರಕಾರ ಹಾಗೂ ತಾನು ಜನಸಾಮಾನ್ಯರ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ರಸ್ತೆಯ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದ್ದು, ಕಳೆದ ಹಲವಾರು ದಶಕಗಳಿಂದ ಅಭಿವೃದ್ಧಿ ಕಾಣದೆ ಜನಸಾಮಾನ್ಯರ ಬಳಕೆಗೆ ಯೋಗ್ಯವಲ್ಲದಂತಿದ್ದ ರಸ್ತೆಗಳನ್ನು ಉತ್ತಮಗೊಳಿಸುವತ್ತ ಗಮನಹರಿಸಿರುವುದಾಗಿ ತಿಳಿಸಿದರು.

ಅಲ್ಲದೆ ಚಂದನಕೇರೆ ಹಾಡಿಯವರ ಕೋರಿಕೆ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಅವರ ಮನವಿಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್, ವಲಯ ಅಧ್ಯಕ್ಷ ಚಿಮ್ಮಣಮಾಡ ರವಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಜಿ.ಪಂ. ಮಾಜಿ ಸದಸ್ಯ ಬಾನಂಡ ಪ್ರತ್ಯು, ಪಕ್ಷದ ಮುಖಂಡರಾದ ಕಟ್ಟಿ ಕಾರ್ಯಪ್ಪ, ಪಲ್ವಿನ್ ಪೂಣಚ್ಚ, ವಿಶು, ರಾಮಕೃಷ್ಣ, ಮಾಚಿಮಾಡ ಮನು, ಕೇಚಮಾಡ ಸಿದ್ದು ನಾಚಪ್ಪ, ಕುಂಡಚ್ಚಿರ ಮಂಜು ದೇವಯ್ಯ, ಅಯೂಬ್, ಮುಕ್ಕಾಟಿರ ದೀಪು, ಮಧು, ನಿಲ್ಲು, ಬೋಪಣ್ಣ, ಸೋಮಯ್ಯ, ರಮೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.