ಕೂಡಿಗೆ, ಜೂ. ೨೮: ಕುಶಾಲನಗರ ತಾಲೂಕು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಹಾತ್ಮ ಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯ ಪರ್ಯಾಯವಾಗಿ ಜುಲೈ ೧ ರಿಂದ ಹೊಸ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ರೋಜಾರ್ ಅಂಡ್ ಅಜೀವಿಕ್ ಮಿಷನ್ ಪ್ರಾರಂಭವಾಗುತ್ತಿದೆ. ಈ ಕುರಿತಂತೆ ಮಾಸ್ಟರ್ ಟ್ರೆöÊನರ್‌ಗಳಾದ ಕುಶಾಲನಗರ ತಾಲೂಕು ಪಂಚಾಯಿತಿಯ ಸಹಾಯಕ ನಿರ್ದೇಶಕ ರಾಕೇಶ್ ಮತ್ತು ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಸುಮೇಶ್ ಅವರಿಂದ ತಾಲೂಕು ವ್ಯಾಪ್ತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರವು ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನೆರವೇರಿತು.
ಈ ಸಂದರ್ಭ ಯೋಜನೆಯ ಬಗ್ಗೆ ಮಾಹಿತಿಯನ್ನು ಒದಗಿಸಲಾಯಿತು. ತರಬೇತಿಯಲ್ಲಿ ಕುಶಾಲನಗರ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಡಾಟಾ ಎಂಟ್ರಿ ಆಪರೇಟರ್ಸ್ ಸಂಬAಧಪಟ್ಟ ನರೇಗಾ ತಾಂತ್ರಿಕ ಸಹಾಯಕರುಗಳು ಮತ್ತು ನರೇಗಾ ಸಿಬ್ಬಂದಿಗಳು ಹಾಜರಿದ್ದರು.