ಶ್ರೀಮಂಗಲ, ಜೂ. ೨೮: ಕೊಡವ ತಕ್ಕ್ ಎಳ್ತ್ಕಾರಡ ಕೂಟ ಹಾಗೂ ವೀರಾಜಪೇಟೆ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಜಂಟಿ ಆಶ್ರಯದಲ್ಲಿ ತಾ. ೩೦ರಂದು ಅಪರಾಹ್ನ ೨ ಗಂಟೆಗೆ ವೀರಾಜಪೇಟೆ ಕೊಡವ ಸಮಾಜದಲ್ಲಿ ವಿಶೇಷ ಕೊಡವ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಈ ಸಂದರ್ಭ ಕೂಟದ ಜನಪ್ರಿಯ ಕೊಡವ ಸಾಹಿತ್ಯ ಮಾಲೆ ಯೋಜನೆಯ ೧೯೯ನೆ ಹೆಜ್ಜೆಯ ಪುಸ್ತಕ ಲೋಕಾರ್ಪಣೆಗೊಳಿಸಲಾಗುತ್ತದೆ.ಇದರೊಂದಿಗೆ ಪ್ರಾಥಮಿಕ, ಪ್ರೌಢ ಶಾಲೆ, ಕಾಲೇಜು ಹಾಗೂ ಸಾರ್ವಜನಿಕ ವಿಭಾಗದಲ್ಲಿ ಕೊಡವ ಭಾಷೆಯ ಹಾಡುಗಾರಿಕೆ, ಕೊಡವ ಪುಸ್ತಕ ಓದುವುದು ಹಾಗೂ ಕೊಡವ ಭಾಷೆಯಲ್ಲಿ ಹಾಸ್ಯ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ವಿಭಾಗವಾರು ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು.
ಕೊಡವ ತಕ್ಕ್ ಎಳ್ತ್ಕಾರಡ ಕೂಟದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ, ವೀರಾಜಪೇಟೆ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ಅಧ್ಯಕ್ಷೆ ತಾತಂಡ ಜ್ಯೋತಿ ಪ್ರಕಾಶ್,೧೯೯ನೆ ಪುಸ್ತಕದ ಲೇಖಕಿ ಹಾಗೂ ದಾನಿ ಕಿಕ್ಕೇರಿಯಂಡ ಲೀಲ ಅಯ್ಯಪ್ಪ, ಪುಸ್ತಕ ಪ್ರಕಟಣೆಯ ದಾನಿ ನಾಯಕಂಡ ಮಧು ಬೋಪಯ್ಯ, ಭಾಗವಹಿಸಲಿದ್ದಾರೆ ಎಂದು ಕೂಟದ ಪ್ರಕಟಣೆ ತಿಳಿಸಿದೆ.