ಕುಶಾಲನಗರ, ಜೂ. ೨೮: ತಾ. ೩೦ ರಂದು ಹಿಂದೂ ಪರ ಸಂಘಟನೆಗಳು ಹಮ್ಮಿಕೊಂಡಿರುವ ಜಾಗೃತಿ ರ‍್ಯಾಲಿ ಶಾಂತಿಯುತವಾಗಿ ನಡೆಸುವಂತೆ ಸೋಮವಾರಪೇಟೆ ವಿಭಾಗದ ಪೊಲೀಸ್ ಉಪ ಅಧೀಕ್ಷಕ ಚಂದ್ರಶೇಖರ್ ಮನವಿ ಮಾಡಿದ್ದಾರೆ.
ಡಿವೈಎಸ್‌ಪಿ ಕಚೇರಿಯಲ್ಲಿ ಹಿಂದೂಪರ ಸಂಘಟನೆಯ ಪ್ರಮುಖರೊಂದಿಗೆ ಚರ್ಚಿಸಿದ ಚಂದ್ರಶೇಖರ್ ಮತಾಂತರ ಪ್ರಕರಣಕ್ಕೆ ಸಂಬAಧಿಸಿದAತೆ ಪ್ರಮುಖ ಆರೋಪಿಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಇನ್ನು ಹೆಚ್ಚಿನ ವಿಚಾರಣೆ ನಡೆಯುತ್ತಿದೆ. ಪ್ರತಿಯೊಬ್ಬರೂ ಪೊಲೀಸರೊಂದಿಗೆ ಸಹಕರಿಸುವಂತೆ ಕೋರಿದ್ದಾರೆ.
ಪೊಲೀಸ್ ವೃತ್ತ ನಿರೀಕ್ಷಕರಾದ ಪ್ರದೀಪ್ ಕುಮಾರ್, ದಿನೇಶ್ ಕುಮಾರ್ ಠಾಣಾಧಿಕಾರಿ ಶಿವಣ್ಣ ಮತ್ತು ಹಿಂದೂಪರ ಸಂಘಟನೆಗಳ ಪ್ರಮುಖರು ವಿವಿಧ ಸಮಾಜಗಳ ಅಧ್ಯಕ್ಷರು ಪದಾಧಿಕಾರಿಗಳು ಇದ್ದರು.