ಕೂಡಿಗೆ, ಜೂ. ೩೦: ಹೆಬ್ಬಾಲೆಯಲ್ಲಿರುವ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ನೂತನವಾಗಿ ರೂ. ೨೦ ಲಕ್ಷ ವೆಚ್ಚದಲ್ಲಿ ಗ್ಯಾಲರಿ ನಿರ್ಮಾಣ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡುತ್ತಾ ಗ್ರಾಮೀಣ ಪ್ರದೇಶದ ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮೀಣ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆಗೆ ಸಂಬAಧಿಸಿದAತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಹೆಬ್ಬಾಲೆ ಶೇಖರ್, ತೊರೆನೂರು ಸಹಕಾರ ಸಂಘದ ನಿರ್ದೇಶಕ ಕೆ.ಎಸ್. ಕೃಷ್ಣೇಗೌಡ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪ್ರದೀಪ್, ಮುಖ್ಯ ಶಿಕ್ಷಕ ವೆಂಕಟೇಶ್ ಸೇರಿದಂತೆ ಶಾಲಾ ಶಿಕ್ಷಕರ ವೃಂದ ಹಾಗೂ ಗ್ರಾಮಸ್ಥರು ಹಾಜರಿದ್ದರು.
ಕಣಿವೆಯಲ್ಲಿ ಭೂಮಿಪೂಜೆ
ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಸಿ.ಎಂ.ಐ.ಡಿ. ಯೋಜನೆಯ ಅಡಿಯಲ್ಲಿ ಬಿಡುಗಡೆಗೊಂಡಿರುವ ೧೦ ಲಕ್ಷ ವೆಚ್ಚದ ಕಾಮಗಾರಿಗೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭೂಮಿ ಪೂಜೆ ನೆರವೇರಿಸಿದರು.
ನಂತರ ಮಾತಾನಾಡಿ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗೆ ಸರಕಾರ ವಿವಿಧ ಯೋಜನೆಯ ಮೂಲಕ ಹಣವನ್ನು ಬಿಡುಗಡೆಗೊಳಿಸಿದೆ. ಅದರ ಮೂಲಕ ದೇವಾಲಯ ಸೇರಿದಂತೆ ಹಲವಾರು ಅಭಿವೃದ್ಧಿ ಪೂರಕವಾದ ಯೋಜನೆಗಳನ್ನು ಕೈಗೊಳ್ಳಲಾಗಿದೆ ಎಂದರು. ಮುಂದಿನ ದಿನಗಳಲ್ಲಿ ತೂಗು ಸೇತುವೆ ದುರಸ್ತಿ ಕಾರ್ಯದ ಜೊತೆಯಲ್ಲಿ ದೇವಾಲಯದ ನೂತನ ಸಭಾಂಗಣದ ನಿರ್ಮಾಣಕ್ಕೆ ರೂ. ೨೦ ಲಕ್ಷ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಶ್ರೀ ರಾಮಲಿಂಗೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್, ಉಪಾಧ್ಯಕ್ಷ ಮಂಜುನಾಥ ಕಾರ್ಯದರ್ಶಿ ಮಹದೇವ, ಸಮಾಜ ಸೇವಕ ಹಕ್ಕೆ ಮೋಹನ್, ಹೆಬ್ಬಾಲೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಶೇಖರ್, ಕುಶಾಲನಗರ ತಾಲೂಕು ಜಿಲ್ಲಾ ಪಂಚಾಯಿತಿ ಸಹಾಯಕ ಇಂಜಿನಿಯರ್ ನಾರಾಯಣ, ಇಂಜಿನಿಯರ್ ಕೀರ್ತನ್, ಪುರಸಭೆಯ ಮಾಜಿ ಸದಸ್ಯ ಹರೀಶ್, ತೊರೆನೂರು ಸಹಕಾರ ಸಂಘದ ನಿರ್ದೇಶಕ ಕೆ.ಎಸ್. ಕೃಷ್ಟೇಗೌಡ, ತೊರೆನೂರು ನೀರು ಬಳಕೆದಾರ ಸಂಘದ ಅಧ್ಯಕ್ಷ ಟಿ.ಕೆ. ಪಾಂಡುರAಗ, ಸೇರಿದಂತೆ ದೇವಾಲಯದ ಸಮಿತಿ ಆಡಳಿತ ಮಂಡಳಿಯ ನಿರ್ದೇಶಕರು, ಸದಸ್ಯರು ಗ್ರಾಮಸ್ಥರು ಇದ್ದರು.