ಮಡಿಕೇರಿ, ಜು.೩: ಕೊಡಗಿನ ಕ್ರೀಡಾ ಪರಂಪರೆಯನ್ನು ಉಳಿಸಲು ಕೂಡಿಗೆ ಕ್ರೀಡಾ ನಿಲಯವನ್ನು ಮುಚ್ಚುವ ನಿರ್ಧಾರವನ್ನು ಕೈಬಿಟ್ಟು ಅಗತ್ಯ ಮೂಲಸೌಕರ್ಯ ಹಾಗೂ ಸೌಲಭ್ಯ ಕಲ್ಪಿಸುವಂತೆ ಕೊಡಗು ಜನ ಅಭಿವೃದ್ಧಿ ಸಮಿತಿ ಆಗ್ರಹಿಸಿದೆ.

ಈ ಕುರಿತು ಜಿಲ್ಲಾಧಿಕಾರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು ಹಾಗೂ ಆಯುಕ್ತರಿಗೆ ಮನವಿ ಸಲ್ಲಿಸಿರುವ ಸಮಿತಿಯ ಅಧ್ಯಕ್ಷ ಎಂ.ಎA.ದಾವೂದ್; ಕೊಡಗು ಜಿಲ್ಲೆ ಭಾರತದ ಕ್ರೀಡಾ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಹೆಮ್ಮೆಯ ನಾಡಾಗಿದೆ. ರಾಷ್ಟಿçÃಯ ಹಾಗೂ ಅಂತರರಾಷ್ಟಿçÃಯ ಮಟ್ಟದಲ್ಲಿ ಸಾಧನೆ ಮಾಡಿದ ಹಾಕಿ, ಅಥ್ಲೆಟಿಕ್ಸ್ ಸೇರಿದಂತೆ ವಿವಿಧ ಕ್ರೀಡೆಗಳ ಅನೇಕ ಪ್ರತಿಭಾವಂತ ಕ್ರೀಡಾಪಟುಗಳನ್ನು ಈ ಮಣ್ಣು ದೇಶಕ್ಕೆ ನೀಡಿದೆ. ಇಂತಹ ಕ್ರೀಡಾ ಪರಂಪರೆಯ ಜಿಲ್ಲೆಯಲ್ಲೇ ಕೂಡಿಗೆಯ ಕ್ರೀಡಾ ನಿಲಯವನ್ನು ಮುಚ್ಚುವ ಪ್ರಯತ್ನ ನಡೆಯುತ್ತಿರುವುದು ಹಾಗೂ ಕ್ರೀಡಾ ಹಾಸ್ಟೆಲ್ ಮೂಲಭೂತ ಸೌಲಭ್ಯಗಳ ಕೊರತೆಯಿಂದ ದುಸ್ಥಿತಿಗೆ ತಲುಪಿರುವುದು ಜಿಲ್ಲೆಯ ಜನತೆಗೆ ಬೇಸರ ಉಂಟುಮಾಡಿದೆ. ಇಂತಹ ಸಂಸ್ಥೆಯನ್ನು ಮುಚ್ಚುವುದು ಕೊಡಗಿನ ಕ್ರೀಡಾ ಭವಿಷ್ಯಕ್ಕೆ ದೊಡ್ಡ ಹೊಡೆತ ನೀಡಿದಂತಾಗುತ್ತದೆ. ಹಾಗಾಗಿ ಕೂಡಿಗೆ ಕ್ರೀಡಾ ನಿಲಯವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು, ಕ್ರೀಡಾ ನಿಲಯವನ್ನು ಮತ್ತಷ್ಟು ಅಭಿವೃದ್ಧಿಪಡಿಸಿ ಹೆಚ್ಚಿನ ಕ್ರೀಡಾಪಟುಗಳಿಗೆ ಅವಕಾಶ ಕಲ್ಪಿಸಬೇಕು, ಕ್ರೀಡಾ ಹಾಸ್ಟೆಲ್‌ನಲ್ಲಿರುವ ಎಲ್ಲಾ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಖಾಲಿ ಇರುವ ಕೋಚ್ ವಾರ್ಡನ್ ಹಾಗೂ ಸಿಬ್ಬಂದಿ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು, ಕ್ರೀಡಾಪಟುಗಳಿಗೆ ಗುಣಮಟ್ಟದ ಆಹಾರ, ವಸತಿ, ವೈದ್ಯಕೀಯ ಸೌಲಭ್ಯ ಹಾಗೂ ಆಧುನಿಕ ಕ್ರೀಡಾ ಉಪಕರಣಗಳನ್ನು ಒದಗಿಸಬೇಕು, ಕೊಡಗು ಜಿಲ್ಲೆಯ ಕ್ರೀಡಾ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು, ಕ್ರೀಡಾ ಇಲಾಖೆಯ ಹಿರಿಯ ಅಧಿಕಾರಿಗಳ ತಂಡವನ್ನು ಜಿಲ್ಲೆಗೆ ಕಳುಹಿಸಿ ಸ್ಥಳ ಪರಿಶೀಲನೆ ನಡೆಸಿ ವರದಿ ಆಧರಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಒಂದು ವೇಳೆ ಸರ್ಕಾರ ಹಾಗೂ ಸಂಬAಧಪಟ್ಟ ಇಲಾಖೆ ಈ ನ್ಯಾಯಸಮ್ಮತ ಬೇಡಿಕೆಗಳನ್ನು ನಿರ್ಲಕ್ಷಿಸಿದಲ್ಲಿ ಕೊಡಗು ಜನ ಅಭಿವೃದ್ಧಿ ಸಮಿತಿಯ ನೇತೃತ್ವದಲ್ಲಿ ಜಿಲ್ಲೆಯ ಕ್ರೀಡಾಪಟುಗಳು, ಪೋಷಕರು, ಮಾಜಿ ಕ್ರೀಡಾಪಟುಗಳು ಹಾಗೂ ಸಾರ್ವಜನಿಕರನ್ನು ಒಳಗೊಂಡು ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.