ಕುಶಾಲನಗರ, ಜು. ೩: ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಿಕಾ ವಿತರಕರಾದ ವಿ.ಪಿ ಪ್ರಕಾಶ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ ರೈನ್ ಕೋಟ್, ಸ್ವೆಟರ್ ವಿತರಿಸಲಾಯಿತು.
ತಾಲೂಕು ಸಂಘದ ಅಧ್ಯಕ್ಷರಾದ ಎಂ.ಎನ್ ಚಂದ್ರಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಪೆರುಮಾಳ್, ಉದ್ಯಮಿಗಳಾದ ದಿವಾಕರ ದಾಸ್, ರಾಮದಾಸ್ ಶೆಟ್ಟಿ, ಸಂಘದ ಪದಾಧಿಕಾರಿಗಳು ಸದಸ್ಯರು ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು.