ಮಡಿಕೇರಿ, ಜು. ೫: ಕಲ್ಯಾಣ ಕ್ರಾಂತಿಯ ಬಳಿಕ ಕಣ್ಮರೆಯಾದ ವಚನ ಸಾಹಿತ್ಯವನ್ನು ಸಂಗ್ರಹಿಸು ವಲ್ಲಿ ಡಾ. ಫ.ಗು. ಹಳಕಟ್ಟಿ ಅವರ ಕಾರ್ಯ ಅವಿಸ್ಮರಣೀಯ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಮೂರ್ತಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಗುರುವಾರ ನಗರದ ಗಾಂಧಿ ಭವನದಲ್ಲಿ ನಡೆದ ಡಾ. ಫ.ಗು.ಹಳಕಟ್ಟಿಯವರ ಜನ್ಮದಿನಾಚರಣೆ (ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ) ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ವಚನ ಸಾಹಿತ್ಯವು ೧೨ನೇ ಶತಮಾನದ ಶರಣರ ಚಿಂತನೆ, ಸಮಾನತೆ, ಕಾಯಕ ಮತ್ತು ದಾಸೋಹ ತತ್ವಗಳ ಭಂಡಾರವಾಗಿದೆ. ವಿದ್ಯಾರ್ಥಿಗಳು ವಚನಗಳನ್ನು ಮೈಗೂಡಿಸಿಕೊಳ್ಳಬೇಕು. ದಿನಕ್ಕೆ ಒಂದು ವಚನಗಳನ್ನಾದರೂ ಕಲಿತು ಅದರ ಮೆರುಗನ್ನು ಬದುಕಿನಲ್ಲಿ ಅನುಸರಿಸಬೇಕು ಎಂದು ಸಲಹೆ ನೀಡಿದರು. ಡಾ. ಫ.ಗು. ಹಳಕಟ್ಟಿ ಅವರು ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ವಚನ ಸಾಹಿತ್ಯದ ಅಧ್ಯಯನದಿಂದ ಅರಿವು ಜಾಗೃತಗೊಂಡು, ಬೆಳಕು ಮೂಡುತ್ತದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಶಿವಪ್ಪ ಅವರು, ವಚನ ಗಳಲ್ಲಡಗಿರುವ ಜಾತ್ಯತೀತ ಹಾಗೂ ಸಮಾನತೆಯ ಸಂದೇಶವನ್ನು ಪ್ರತಿ ಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ಕರೆ ನೀಡಿದರು. ಕನ್ನಡ ಸಾಹಿತ್ಯ ಪರಿಷತ್ ಕುಶಾಲನಗರ ಹೋಬಳಿ ಅಧ್ಯಕ್ಷರಾದ ಎಂ.ಎಸ್. ಮೂರ್ತಿ ಅವರು ಉಪನ್ಯಾಸ ನೀಡಿ, ಬಸವಾದಿ ಶರಣರ ವಚನಗಳನ್ನು ಆಧುನಿಕ ಕಾಲದಲ್ಲಿ ಜನಮನಕ್ಕೆ ತಲುಪಿಸಿದ ಕೀರ್ತಿ ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದರು.
ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕರಾದ ಪುಟ್ಟರಾಜು ಅವರು ವಚನ ಗಾಯನ ಹಾಡಿದರು. ಮಡಿಕೇರಿ ತಾಲೂಕು ಕದಳಿ ವೇದಿಕೆ ಅಧ್ಯಕ್ಷೆ ವಿಜಯಲಕ್ಷಿö್ಮ, ಮಡಿಕೇರಿ ತಾಲೂಕು ಶಿರಸ್ತೇದಾರ್ ದೇವರಾಜು, ಕುಶಾಲನಗರ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಶಾಂಭಶಿವಮೂರ್ತಿ, ಬ್ಲಾಸಂ ಶಾಲೆಯ ಶಿಕ್ಷಕಿ ಸರೀನ, ವಿದ್ಯಾರ್ಥಿಗಳು ಇದ್ದರು.
ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸ್ವಾಗತಿಸಿ, ಮಣಜೂರು ಮಂಜುನಾಥ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಬ್ಲಾಸಂ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು.