ಸುಂಟಿಕೊಪ್ಪ, ಜು. ೫: ಪತ್ರಕರ್ತರ ಮೇಲೆ ಸಾಮಾಜಿಕ ಜವಾಬ್ದಾರಿ ಹೆಚ್ಚಿ

ದೆ ಎಂದು ಐಶ್ವರ್ಯ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಅಮ್ಮಾಟಂಡ ಎ ಜೋಯಪ್ಪ ಅಭಿಪ್ರಾಯ ಪಟ್ಟರು.

ಕೊಡಗು ಪತ್ರಕರ್ತರ ಸಂಘದ ಕುಶಾಲನಗರ ತಾಲೂಕು ಘಟಕದಿಂದ ಗುಡ್ಡೆಹೊಸೂರಿನ ಐಶ್ವರ್ಯ ವಿದ್ಯಾ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾ ದಿನಾÀಚರಣೆ ಜ್ಞಾನ ಗಂಗಾ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಿಕಾರಂಗ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿ ಗೌರವಿಸಲ್ಪಟ್ಟಿದೆ. ಈ ಹಿನ್ನಲೆಯಲ್ಲಿ ಪ್ರಸ್ತುತ ಕಾಲಘಟ್ಟದಲ್ಲಿ ವಿವಿಧ ಮಾಧ್ಯಮಗಳು ನೀಡುವ ಸುದ್ದಿಗಳೆಲ್ಲಾ ವಾಸ್ತವ ಎಂದು ನಂಬುವ ಪರಿಸ್ಥಿತಿಯಿದೆ ಆದರೆ ಮುದ್ರಣ ಮಾಧ್ಯಮ ಈ ಪೈಕಿ ಹೆಚ್ಚು ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿದೆ ಎಂದು ಶ್ಲಾಘಿಸಿದರು. ದಿನದ ಮಹತ್ವದ ಕುರಿತು ಉಪನ್ಯಾಸ ನೀಡಿದ ಹಿರಿಯ ಪತ್ರಕರ್ತ ಎಸ್. ಜಿ.ಉಮೇಶ್ ಮಾತನಾಡಿ ರಾಷ್ಟ್ರ ಮತ್ತು ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಂಪನ್ಮೂಲ ಆಕಾರಗಳಾಗಿ ಪತ್ರಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ.

ಶಾಲಾ ಕಾಲೇಜು ಹಂತದಲ್ಲಿ ಪಠ್ಯ ಪುಸ್ತಕಗಳ ಹುಳುಗಳಾಗದೆ ಪಠ್ಯೇತರ ಚಟುವಟಿಕೆಗಳಲ್ಲಿ ಪ್ರಮುಖವಾಗಿ ಶಾಲಾ ಗ್ರಂಥಾಲಯಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಬಳಸಿಕೊಂಡು ಜೀವನದಲ್ಲಿ ಪ್ರಭಾವಶಾಲಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ. ಅನಿಲ್ ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಮತ್ತು ಕೊಡಗು ಚಂದ್ರಿಕೆಯಿAದ ಹಿಡಿದು ಪ್ರಸ್ತುತದವರೆಗೆ ಪತ್ರಿಕೋದ್ಯಮದ ಬೆಳವಣಿಗೆ ಬಗ್ಗೆ ಮಾಹಿತಿ ನೀಡಿ ಸುದ್ದಿ ಇಲ್ಲದ ಪ್ರಪಂಚ ಶೂನ್ಯ ಎಂದರಲ್ಲದೆ ಎಷ್ಟೇ ಡಿಜಿಟಲೀಕರಣವಾದರೂ ಕೂಡ ಮುದ್ರಣ ಮಾಧ್ಯಮಕ್ಕೆ ಅಳಿವಿಲ್ಲ ಎಂದು ಪ್ರತಿಪಾದಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಆರ್ ಸುನಿಲ್‌ಕುಮಾರ್ ಮತ್ತು ಸುಂಟಿಕೊಪ್ಪ ಹೋಬಳಿ ಕಸಾಪ ಅಧ್ಯಕ್ಷ ಪಿ.ಎಫ್. ಸಬಾಸ್ಟಿನ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ಜ್ಞಾನಗಂಗಾ ದತ್ತಿನಿಧಿ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತ ಎಂ.ಬಿ. ವಿನ್ಸೆಂಟ್ ಅವರಿಗೆ ಗಣ್ಯರು ಪ್ರದಾನ ಮಾಡಿದರು ವೇದಿಕೆಯಲ್ಲಿ ಕೊಡಗು ಪತ್ರಕರ್ತರ ಸಂಘದ ಖಜಾಂಚಿ ಸಂತೋಷ್ ಟಿ ಕೆ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಘಟಕದ ಅಧ್ಯಕ್ಷ ಬಿ.ಸಿ. ದಿನೇಶ್ ವಹಿಸಿದ್ದರು. ಸಮಾರಂಭದಲ್ಲಿ ಪತ್ರಕರ್ತ ಲೋಕೇಶ್ ಸಾಗರ್ ಭಾವಗೀತೆ ಹಾಡಿದರು.

ಸಮಾರಂಭದಲ್ಲಿ ತಾಲೂಕು ಸಂಘದ ಉಪಾಧ್ಯಕ್ಷ ನವೀನ್ ಚಿಣ್ಣಪ್ಪ, ಖಜಾಂಚಿ ಕೆ.ಎಸ್ ಅನಿಲ್ ಕುಮಾರ್,ಗೌರವ ಸಲಹೆಗಾರ ಕೆ.ತಿಮ್ಮಪ್ಪ, ಜಿಲ್ಲಾ ನಿರ್ದೇಶಕ ಗುಡ್ಡೆಮನೆ ವಿಶ್ವಕುಮಾರ್ ಸಹ ಕಾರ್ಯದರ್ಶಿ ಬಿ.ಎನ್.ರವಿಕುಮಾರ್,ಎಂ.ಎಸ್.ಸುನಿಲ್ ಹಾಗೂ ಅಲ್ಪೆರ್ಡ್ ಡಿಸೋಜ ಮತ್ತಿತರರು ಇದ್ದರು.