ಮಡಿಕೇರಿ, ಜು. ೫: ಸಹಕಾರ ಸಚಿವಾಲಯ ಪ್ರಾರಂಭಗೊAಡು ಐದು ವರ್ಷಗಳು ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ‘ಸಹಕಾರದಿಂದ ಸಮೃದ್ಧಿ’ ಎಂಬ ಧ್ಯೇಯದೊಂದಿಗೆ ಸಹಕಾರ ಕ್ಷೇತ್ರವು ನೀಡಿರುವ ಕೊಡುಗೆಗಳು, ಸಾಧನೆಗಳು ಹಾಗೂ ಕೈಗೊಂಡಿರುವ ಉಪಕ್ರಮಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ದೇಶದಾದ್ಯಂತ ಸಹಕಾರ ಸಪ್ತಾಹದ ಮಾದರಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕೊಡಗು ಜಿಲ್ಲೆಯಲ್ಲಿಯೂ ಸಹ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಚರಿಸಲಾಗುತ್ತಿದೆ.
ಉಚಿತ ಆರೋಗ್ಯ ತಪಾಸಣೆ ಹಾಗೂ ಕಣ್ಣಿನ ತಪಾಸಣೆ ಶಿಬಿರವನ್ನು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಬಸವನಹಳ್ಳಿ ಲ್ಯಾಂಪ್ಸ್ ನಿ., ಯಶಸ್ವಿನಿ ಯೋಜನೆ ಟ್ರಸ್ಟ್, ಬೆಂಗಳೂರು, ಸ್ಮಿತ ಐ ಕೇರ್, ಮಡಿಕೇರಿ ಹಾಗೂ ಆಶೋದಯ ಸಮಿತಿ, ಮಡಿಕೇರಿ ಸಂಯುಕ್ತಾಶ್ರಯದಲ್ಲಿ ಬಸವನಹಳ್ಳಿ ಲ್ಯಾಂಪ್ಸ್ನ ಆವರಣದಲ್ಲಿ ನಡೆಸಲಾಯಿತು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು. ರಾಬಿನ್ ದೇವಯ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶ್ರಮಿಕ ವರ್ಗದವರಿರುವ ಈ ಪ್ರದೇಶದಲ್ಲಿ ಇಂತಹ ಆರೋಗ್ಯ ತಪಾಸಣಾ ಶಿಬಿರವು ಹಲವಷ್ಟು ಜನರಿಗೆ ಪ್ರಯೋಜನವಾಗುತ್ತದೆ. ಈ ಶಿಬಿರಕ್ಕೆ ಸ್ಮಿತಾ ಐ ಕೇರ್ನ ಡಾ. ಪ್ರಶಾಂತ್ ಹಾಗೂ ಯಶಸ್ವಿನಿ ಸಂಯೋಜನಾಧಿಕಾರಿ ಚೇತನ್ ಹಾಗೂ ಆಶೋದಯ ಸಮಿತಿಯವರು ಸಹಕಾರ ನೀಡಿದ್ದಾರೆ. ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಉಚಿತವಾಗಿ ಕನ್ನಡಕವನ್ನು ಅಗತ್ಯ ವುಳ್ಳವರಿಗೆ ವಿತರಿಸಲಾಗುತ್ತಿದೆ. ಈ ಎಲ್ಲ ಕೆಲಸ ಕಾರ್ಯ ನಡೆಸಲು ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯ ಪ್ರಾರಂಭಗೊAಡು ೫ ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನಲೆಯಲ್ಲಿ ಒಂದು ವಾರದ ಕಾಲ ವಿವಿಧ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದು, ಅದರ ಒಂದು ಭಾಗವಾಗಿ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಸವನಹಳ್ಳಿ ಲ್ಯಾಂಪ್ಸ್ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಲ್ಯಾಂಪ್ಸ್ ಮಹಾಮಂಡಳದ ಅಧ್ಯಕ್ಷ ಎಸ್.ಆರ್. ಅರುಣ್ ರಾವ್ ಮಾತನಾಡಿ, ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಇಂತಹ ಉತ್ತಮ ಕಾರ್ಯಕ್ರಮಕ್ಕೆ ಯೋಜನೆ ರೂಪಿಸಿದ್ದು ಸ್ಥಳೀಯ ಜನರಿಗೆ ಉಪಕಾರಿಯಾಗಿದೆ ಎಂದರು.
ವೇದಿಕೆಯಲ್ಲಿ ಜಿಲ್ಲಾ ಸಹಕಾರ ಯೂನಿಯನ್ ನಿದೇಶಕರಾದ ಅಮೃತ್ ವಿ.ಸಿ., ಎಸ್.ಆರ್. ಸುನಿಲ್ ರಾವ್, ಸೋಮವಾರಪೇಟೆ ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಪಿ.ಬಿ. ಮೋಹನ್, ಬಸವನಹಳ್ಳಿ ಲ್ಯಾಂಪ್ಸ್ನ ಉಪಾಧ್ಯಕ್ಷರು, ನಿರ್ದೇಶಕರುಗಳು, ಯಶಸ್ವಿನಿ ಯೋಜನೆ ಟ್ರಸ್ಟ್ನ ಜಿಲ್ಲಾ ಸಂಯೋಜನಾಧಿಕಾರಿ ಚೇತನ್, ಸ್ಮಿತಾ ಐ ಕೇರ್ನ ಡಾ. ಪ್ರಶಾಂತ್, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ಮಿತಾ ಐ ಕೇರ್ನ ಡಾ. ಪ್ರಶಾಂತ್ ಹಾಗೂ ಸಿಬ್ಬಂದಿಗಳು ಉಚಿತ ಕಣ್ಣಿನ ತಪಾಸಣೆ ನಡೆಸಿದರೆ, ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಉಚಿತ ಮಧುಮೇಹ, ಬಿ.ಪಿ. ಹಾಗೂ ಹೆಪಟೈಟೀಸ್ ರೋಗದ ತಪಾಸಣೆ ನಡೆಸಿದರು. ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.