ಸುಂಟಿಕೊಪ್ಪ, ಜು. ೫: ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಸುಂಟಿಕೊಪ್ಪ ವಲಯದ ವತಿಯಿಂದ ಮಾದಾಪುರದ ಗರಗಂದೂರಿನ ಶ್ರೀಮತಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು.
ಶ್ರೀಮತಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯರಾದ ಎಂ.ಟಿ. ಅಯ್ಯಪ್ಪ ಅವರು ಉದ್ಘಾಟಿಸಿ ಮಾತನಾಡಿದರು.
ಕಾಲೇಜು ಪ್ರಾಂಶುಪಾಲ ಮಂದಪ್ಪ ಅವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಪೊಲೀಸ್ ಅಧಿಕಾರಿ ಆಕಾಶ್ ಉಪಸ್ಥಿತರಿದ್ದರು. ವೀಡಿಯೋ ಕಾನ್ಫರೆನ್ಸ್ ಮೂಲಕ ಧರ್ಮಸ್ಥಳದಿಂದ ಪೂಜ್ಯ ಡಾಕ್ಟರ್ ಡಿ. ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಕುರಿತು ಆಶೀರ್ವಚನ ನೀಡಿದರು. ಹೇಮಾವತಿ ಹೆಗ್ಗಡೆಯವರು ಮಾದಕ ವಸ್ತು ಸೇವನೆ ಯಾವ ರೀತಿ ಅಪಾಯಕಾರಿ ಎನ್ನುವುದರ ಬಗ್ಗೆ ಮಾಹಿತಿ ನೀಡಿದರು.
ಬೆಂಗಳೂರು ಪೊಲೀಸ್ ಅಧ್ಯಕ್ಷರ ಅಧೀಕ್ಷಕ ವೆಂಕಟೇಶ್ ಉತ್ತಮ ರೀತಿಯಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ಬಗ್ಗೆ ವಿವರವಾಗಿ ಅದರಿಂದ ಆಗುವ ದುಷ್ಪರಿಣಾಮದ ಬಗ್ಗೆ ಮತ್ತು ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಎಸ್.ಎಸ್. ಕಾರ್ಯಕ್ರಮದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ವಿವೇಕ್ ವಿನ್ಸೆಂಟ್ ಪಾಯ್ಸ್ ನಿರೂಪಿಸಿದರು.