ಸೋಮವಾರಪೇಟೆ, ಜು. ೫: ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಪಂಚಾಯಿತಿ ವತಿಯಿಂದ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು. ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಎಸ್ಐಆರ್ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಜಾಥಾಕ್ಕೆ, ಸೋಮವಾರಪೇಟೆ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿ ಪರಮೇಶ್ಕುಮಾರ್ ಚಾಲನೆ ನೀಡಿದರು. ತಾಲೂಕು ಪಂಚಾಯಿತಿ ಆವರಣದಿಂದ ನಗರದಲ್ಲಿ ಬೈಕ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಂಡು ಎಸ್ಐಆರ್ ಬಗ್ಗೆ ಅರಿವು ಮೂಡಿಸುವ ಪೋಸ್ಟರ್ಗಳೊಂದಿಗೆ ಜಾಗೃತಿ ಅಭಿಯಾನ ನಡೆಯಿತು.
ನಂತರ ವಿಕಲಚೇತನರ ಮನೆಗಳಿಗೆ ಭೇಟಿ ನೀಡಿ ಬಿಎಲ್ಓಗಳ ಸಮ್ಮುಖದಲ್ಲಿ ಎಸ್ಐಆರ್ ಬಗ್ಗೆ ಮಾಹಿತಿ ನೀಡಿ, ಅರ್ಜಿ ಭರ್ತಿ ಮಾಡಿಸಲಾಯಿತು. ಸೋಮವಾರಪೇಟೆ ತಾಲೂಕು ವ್ಯಾಪ್ತಿಯ ವಳಗುಂದ ಮತ್ತು ಹಿತ್ಲುಮಕ್ಕಿ ಹಾಡಿಗಳ ಮನೆ ಮನೆ ಭೇಟಿ ನೀಡಿ ಹಾಡಿ ಜನರಿಗೆ ಈ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಇದರೊಂದಿಗೆ ಶಾಲಾ ಕಾಲೇಜುಗಳಿಗೆ ತೆರಳಿ ತಮ್ಮ ಪೋಷಕರಿಗೆ ಎಸ್ಐಆರ್ ಬಗ್ಗೆ ಮಾಹಿತಿ ನೀಡುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.
ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದೇಗೌಡ, ತಾ.ಪಂ. ಸಹಾಯಕ ನಿರ್ದೇಶಕ ಶ್ರೀನಿವಾಸ್ ಮತ್ತು ಸಹಾಯಕ ನಿರ್ದೇಶಕ ರಾಕೇಶ್, ಸಿಬ್ಬಂದಿಗಳು ಸೇರಿದಂತೆ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಇದ್ದರು.