ವೀರಾಜಪೇಟೆ, ಜು. ೫: ೨೦೨೫-೨೬ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ತೇರ್ಗಡೆ ಹೊಂದಿದ ವೀರಾಜಪೇಟೆಯ ಸಾಧಕ ವಿದ್ಯಾರ್ಥಿ ಬಿ.ಆರ್. ಭವಿಷ್ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಮಡಿಕೇರಿಯ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಬೆಂಗಳೂರು ಹಾಗೂ ಕೊಡಗು ಜಿಲ್ಲಾ ಈಡಿಗ ಮತ್ತು ಬಿಲ್ಲವ ಘಟಕ ಮಡಿಕೇರಿ ಇವುಗಳ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಎಂ. ಶ್ರೀನಿವಾಸ್ ಹಾಗೂ ಕೊಡಗು ಈಡಿಗ ಬಿಲ್ಲವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಸಿ. ಕುಮಾರ್ ಸೇರಿದಂತೆ ಹಲವು ಪ್ರಮುಖ ಗಣ್ಯರು ಉಪಸ್ಥಿತರಿದ್ದು, ಸಾಧಕ ವಿದ್ಯಾರ್ಥಿಯನ್ನು ಸನ್ಮಾನಿಸಿದರು.
ಬಿ.ಆರ್. ಭವಿಷ್ ವೀರಾಜಪೇಟೆಯ ಪಂಜರಪೇಟೆ ನಿವಾಸಿಗಳಾದ ಬಿ.ಎನ್. ರಮೇಶ್ (ರಘು) ಹಾಗೂ ಆಶಾ ದಂಪತಿ ಪುತ್ರ.