ವೀರಾಜಪೇಟೆ, ಜು. ೫: ಹುಲಿ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಟೈಗರ್ ಔಟ್‌ಸೈಡ್ ಟೈಗರ್ ರಿಸರ್ವ್ಸ್ -ಟಿಒಟಿಆರ್ ಪೈಲಟ್ ಸ್ಕೀಮ್" ಅಡಿಯಲ್ಲಿ ವೀರಾಜಪೇಟೆ ಅರಣ್ಯ ಇಲಾಖೆ ವತಿಯಿಂದ ಅರಣ್ಯ ಪ್ರವಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು.

ರಾಷ್ಟಿçÃಯ ಹುಲಿ ಸಂರಕ್ಷಣಾ ಪ್ರಾಧಿಕಾರ ಮತ್ತು ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ ೨೦೨೫-೨೬ ಯೋಜನೆಯಡಿ ಅರಣ್ಯ ಇಲಾಖೆಯ ವೀರಾಜಪೇಟೆ ವಲಯದ ಪ್ರಾದೇಶಿಕ ವಿಭಾಗದ ವತಿಯಿಂದ ಆಯೋಜನೆಗೊಂಡ ಅರಣ್ಯದಲ್ಲಿ ಅಧ್ಯಯನ ಪ್ರವಾಸ ಕಾರ್ಯಕ್ರಮದಲ್ಲಿ ವೀರಾಜಪೇಟೆಯ ವಿವಿಧ ಮಹಿಳಾ ಸಂಘಗಳ ಸದಸ್ಯರು, ಮಹಿಳಾ ಸಮಾಜದ ಸದಸ್ಯರು ಮತ್ತು ಮಕ್ಕಳು ಭಾಗವಹಿಸಿ ವನ್ಯ ಜೀವಿಗಳ ಬಗ್ಗೆ ಮಾಹಿತಿ ತಿಳಿದುಕೊಂಡರು.

ಕಾಕನಕೋಟೆ ಸಫಾರಿ ಕೇಂದ್ರ, ಬಂಡೀಪುರ, ನಾಗರಹೊಳೆ ವನ್ಯ ಜೀವಿಧಾಮಗಳಿಗೆ ಭೇಟಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಹುಲಿ ಹಾಗೂ ಇತರೆ ವನ್ಯಜೀವಿಗಳ ಸಂರಕ್ಷಣೆ, ಮಾನವ-ವನ್ಯಜೀವಿ ಸಂಘರ್ಷ ತಡೆ, ಅರಣ್ಯದ ಮಹತ್ವದ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ವೀರಾಜಪೇಟೆ ತಾಲೂಕು ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಾಣಾಧಿಕಾರಿ ಜಗನ್ನಾಥ್ ಅವರ ನಿರ್ದೇಶನದಂತೆ ಅಧ್ಯಯನ ಪ್ರವಾಸ ಕೈಗೊಳ್ಳಲಾಯಿತು. ಅರಣ್ಯ ಇಲಾಖೆಯ ಸಿಬ್ಬಂದಿಗಳಾದ ಅನಿಲ್, ಮಹೇಶ್ ಹಾಜರಿದ್ದು ಮಾರ್ಗದರ್ಶನ ನೀಡಿದರು.