ಮಡಿಕೇರಿ, ಜು. ೫: ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಇಲಾಖೆ ಸಚಿವರು ಮತ್ತು ಕೊಡಗು ಜಿಲ್ಲೆಯ ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲುಸ್ತುವಾರಿಗಳಾಗಿರುವ ಯು.ಟಿ. ಖಾದರ್ ಅವರು ಇಂದು ಮಡಿಕೇರಿಗೆ ಆಗಮಿಸಿದರು. ಈ ವೇಳೆ ಅವರನ್ನು ವೀರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಇವರುಗಳು ಮಾಲಾರ್ಪಣೆ ಮಾಡುವ ಮೂಲಕ ಜಿಲ್ಲೆಗೆ ಸ್ವಾಗತಿಸಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜಾ ಉತ್ತಪ್ಪ ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.