ವೀರಾಜಪೇಟೆ, ಜು. ೧೧: ವೀರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಪೊನ್ನಂಪೇಟೆ, ವೀರಾಜಪೇಟೆ, ಮಡಿಕೇರಿ ತಾಲೂಕು ಅಂಗನವಾಡಿಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗೆ, ಆಯ್ಕೆಯಾದ ಅಭ್ಯರ್ಥಿಗಳಿಗೆ ವೀರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರು ಗೃಹ ಕಚೇರಿಯಲ್ಲಿ ಆದೇಶ ಪತ್ರ ವಿತರಿಸಿದರು.
೨೫ ಅಂಗನವಾಡಿ ಕಾರ್ಯಕರ್ತೆ, ಹಾಗೂ ೩೪ ಅಂಗನವಾಡಿ ಸಹಾಯಕಿಯರಿಗೆ ಆದೇಶ ಪತ್ರ ನೀಡಿ ಶುಭಕೋರಿದ ಶಾಸಕರು, ದೊರಕಿದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ರೀತಿಯಲ್ಲಿ ಕೆಲಸ ಮಾಡುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿಗಳು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.