ಕಡಂಗ, ಜು. ೧೧ : ಸ್ಥಳೀಯ ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೈತಾಡಿ ಚಾಮಿಯಾಲ ಗ್ರಾಮದಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಫಿ, ಬಾಳೆ ಮತ್ತಿತರ ಗಿಡಗಳನ್ನು ನಾಶಪಡಿಸಿದೆ.
ಚಾಮಿಯಾಲ ಗ್ರಾಮದ ಶಾದುಲಿ ಕೆ.ಎ. ಮತ್ತು ಕೆ.ಎ. ಮುಸ್ತಫಾರವರ ಕಾಫಿ, ಬಾಳೆ ಹಾಗೂ ಮತ್ತಿತರÀ ಗಿಡಗಳನ್ನು ತುಳಿದು ನಾಶಪಡಿಸಿದ್ದು, ನಷ್ಟ ಉಂಟಾಗಿದೆ.
ಕಾಡಾನೆ ಹಾವಳಿಯಿಂದ ಕಾರ್ಮಿಕರು ತೋಟಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಅರಣ್ಯ ಇಲಾಖೆ ಕಾಡಾನೆಗಳು ತೋಟಕ್ಕೆ ನುಸುಳದಂತೆ ಕ್ರಮ ಕೈಗೊಳ್ಳಬೇಕು, ಕಾಡಾನೆಗಳನ್ನು ಬೇರೆಡೆ ಸ್ಥಳಾಂತರಿಸಬೇಕು ಹಾಗೂ ನಷ್ಟ ಅನುಭವಿಸಿದ ತೋಟದ ಮಾಲೀಕರಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.