ಮಡಿಕೇರಿ ಜು.೧೧: ಕೊಡಗು ಜಿಲ್ಲೆಯಲ್ಲಿ ತಾ. ೧೭ ರಿಂದ ೧೯ ರವರೆಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರೌಢ ಶಾಲಾ ವಿಭಾಗದಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ೨೦೨೬ ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆ ನಡೆಸುವ ಸಲುವಾಗಿ ಈ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಹಾಗೂ ಅವ್ಯವಹಾರ ನಡೆಯದಂತೆ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ರ ಕಲಂ ೧೬೩ ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರದ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಆದೇಶಿಸಿದ್ದಾರೆ. ಈ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿ ಮತ್ತು ಸೈಬರ್ ಸೆಂಟರ್ಗಳನ್ನು ಮುಚ್ಚಿಸತಕ್ಕದೆಂದು ಸಹ ತಿಳಿಸಿದೆ. ಈ ಆದೇಶವು ಪರೀಕ್ಷಾ ದಿನಗಳಂದೂ ಬೆಳಿಗ್ಗೆ ೯ ಗಂಟೆಯಿAದ ಸಂಜೆ ೫.೩೦ ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ.