ಮಡಿಕೇರಿ, ಜು. ೧೧: ಕರ್ನಾಟಕ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ೨೦೦೨ರ ನವೆಂಬರ್ ೪ ರಂದು ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಪ್ರಾರಂಭಗೊAಡ ‘ಸಾಂತ್ವನ ಮಹಿಳಾ ಸಹಾಯವಾಣಿ’ ಕೊಡಗಿನಾದ್ಯಂತ ಸಮಾಜದ ನೊಂದ ಮಹಿಳೆಯರು ಪ್ರತಿಯೊಂದು ಸ್ತರದಲ್ಲಿ ಎದುರಿಸುತ್ತಿರುವ ಹಲವಾರು ಸಮಸ್ಯೆಗಳನ್ನು ದಾಖಲಿಸಿಕೊಂಡು ತಕ್ಷಣಕ್ಕೆ ಸರಿಯಾದ ಸಲಹೆ - ಸೂಚನೆಗಳನ್ನು ನೀಡಿ ನೆರವು ಕಲ್ಪಿಸುತ್ತಾ ಬಂದಿರುತ್ತದೆ.

ಸಾಂತ್ವನ ಕೇಂದ್ರದಲ್ಲಿ ಈವರೆಗೆ ೫,೮೨೪ ವಿವಿಧ ಸ್ವರೂಪದ ಪ್ರಕರಣಗಳು ದಾಖಲಾಗಿದ್ದು, ೫,೭೯೨ ಪ್ರಕರಣಗಳು ಇತ್ಯರ್ಥಗೊಂಡಿರುತ್ತದೆ. ೨೦೨೬-೨೭ನೇ ಆರ್ಥಿಕ ಸಾಲಿನಲ್ಲಿ ೬೯ ಪ್ರಕರಣಗಳು ದಾಖಲಾಗಿ, ೫೧ ಪ್ರಕರಣಗಳು ಇತ್ಯರ್ಥಗೊಂಡು ಹಿಂದಿನ ಸಾಲಿನ ಉಳಿಕೆ ಪ್ರಕರಣಗಳು ಸೇರಿ, ಉಳಿದ ೧೮ ಪ್ರಕರಣಗಳು ಇತ್ಯರ್ಥದ ಹಂತದಲ್ಲಿರುತ್ತದೆ.

ಮಹಿಳಾ ಸಹಾಯವಾಣಿಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಾಂತ್ವನ ಕೇಂದ್ರದ ಅಧ್ಯಕ್ಷ ಬಿ.ಕೆ. ರವೀಂದ್ರ ರೈ ಹಾಗೂ ಪ್ರಧಾನ ಕಾರ್ಯದರ್ಶಿ ನಮಿತ ಆರ್. ರೈ ಅವರು ಕೋರಿದ್ದಾರೆ.