ಸುಂಟಿಕೊಪ್ಪ, ಜು. ೧೧: ಹೊರೂರು ಗ್ರಾಮದ ಕೋಟೆಕಾಡು ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ರೈಟರ್ ಮೇಲೆ ಕಾಡುಕೋಣ ದಾಳಿ ನಡೆಸಿರುವ ಘಟನೆಯೊಂದು ವರದಿಯಾಗಿದೆ. ಶನಿವಾರದಂದು ಕೆದಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊರೂರು ಗ್ರಾಮದ ಕೋಟೆಕಾಡು ತೋಟದಲ್ಲಿ ಮುತ್ತಪ್ಪ (೬೨) ಎಂಬವರು ರೈಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಎಂದಿನAತೆ ಬೆಳಿಗ್ಗೆ ೧೧ ಗಂಟೆಯ ಸಂದರ್ಭ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾಡುಕೋಣವೊಂದು ಏಕಾಏಕಿ ದಾಳಿ ನಡೆಸಿದೆ. ಕಾಡುಕೋಣದ ದಾಳಿಯಿಂದ ಮುತ್ತಪ್ಪ ಕಾಲು ಮುರಿತಗೊಂಡಿದ್ದು, ದೇಹದ ಇತರ ಭಾಗಗಳಿಗೂ ಗಾಯಗಳಾಗಿವೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯವರು ಭೇಟಿ ನೀಡಿ ಮುತ್ತಪ್ಪ ಅವರಿಗೆ ಚಿಕಿತ್ಸೆಗೆ ಪೂರಕವಾದ ವ್ಯವಸ್ಥೆಯನ್ನು ಮಾಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.