ಮಡಿಕೇರಿ, ಜು. ೧೧: ಕನ್ನಡದಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸಲು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಡಾ. ಟಿ.ಆರ್. ಅನಂತರಾಮು ಹೆಸರಿನಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿಯನ್ನು ನೀಡುತ್ತಿದ್ದು, ವಿಜ್ಞಾನ ಬರಹಗಾರರಿಂದ ಹಾಗೂ ಪ್ರಕಾಶಕರಿಂದ ವಿಜ್ಞಾನ ಕ್ಷೇತ್ರಕ್ಕೆ ಸಂಬAಧಿಸಿದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ ಜನಪ್ರಿಯ ವಿಜ್ಞಾನ ಪುಸ್ತಕಕ್ಕೆ ರೂ. ೨೦ ಸಾವಿರಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಪುರಸ್ಕರಿಸಲಾಗುವುದು. ಆಸಕ್ತ ಲೇಖಕರು/ಬರಹಗಾರರು ಹಾಗೂ ಪ್ರಕಾಶಕರು ನವೆಂಬರ್ ೩೦ ರೊಳಗೆ ಅಕಾಡೆಮಿಯ ವಿಳಾಸಕ್ಕೆ ಪುಸ್ತಕಗಳನ್ನು ಸಲ್ಲಿಸುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ವೆಬ್‌ಸೈಟ್ hಣಣಠಿs:/ /ಞsಣಚಿಛಿಚಿಜemಥಿ.iಟಿ ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆರ್. ಆನಂದ್ ತಿಳಿಸಿದ್ದಾರೆ.