ಮಡಿಕೇರಿ, ಜು. ೧೧ : ರೋಟರಿ ಮಿಸ್ಟಿಹಿಲ್ಸ್ ವತಿಯಿಂದ ಮಡಿಕೇರಿಯ ಸಂಚಾರಿ ಪೊಲೀಸ್ ಸಿಬ್ಬಂದಿಗೆ ರೈನ್ಕೋಟ್ಗಳನ್ನು ಕೊಡುಗೆಯಾಗಿ ನೀಡಲಾಯಿತು. ರೋಟರಿ ಮಿಸ್ಟಿ ಹಿಲ್ಸ್ ನೂತನ ಆಡಳಿತ ಮಂಡಳಿ ಪದಗ್ರಹಣ ಕಾರ್ಯಕ್ರಮದಲ್ಲಿ ಬೆಂಗಳೂರಿನ ೩೧೯೧ ರೋಟರಿ ಜಿಲ್ಲೆಯ ಸಹಾಯಕ ಗವರ್ನರ್ ಪ್ರಕಾಶ್ ಬೆಳವಡಿ ಮಿಸ್ಟಿಹಿಲ್ಸ್ ವತಿಯಿಂದ ನೀಡಲಾದ ೧೦ ರೈನ್ಕೋಟ್ಗಳನ್ನು ಸಂಚಾರಿ ಪೊಲೀಸರಿಗೆ ವಿತರಿಸಿದರು. ಮುಂದಿನ ದಿನಗಳಲ್ಲಿ ಸಂಚಾರಿ ಜಾಗೃತಿ ಕಾರ್ಯಕ್ರಮಗಳನ್ನು ವಿವಿಧೆಡೆ ಆಯೋಜಿಸಲಾಗುತ್ತದೆ ಎಂದು ರೋಟರಿ ಮಿಸ್ಟಿಹಿಲ್ಸ್ ಅಧ್ಯಕ್ಷ ಪಿ.ಆರ್. ರಾಜೇಶ್ ಮಾಹಿತಿ ನೀಡಿದರು. ರೋಟರಿ ಸಹಾಯಕ ಗವರ್ನರ್ ಹೆಚ್.ಎಸ್. ವಸಂತ್ ಕುಮಾರ್, ವಲಯ ಸೇನಾನಿ ಪೊನ್ನಚ್ಚನ ಮಧುಸೂದನ್, ಕಾರ್ಯದರ್ಶಿ ಡಾ. ಜಿ.ಡಿ. ಚೇತನ್, ಮಿಸ್ಟಿಹಿಲ್ಸ್ ಜಿಲ್ಲಾ ಸಂಚಾರಿ ಯೋಜನಾ ಸಮಿತಿ ನಿರ್ದೇಶಕ ಎಸ್.ಎಂ. ಚೇತನ್ ಹಾಜರಿದ್ದರು.