ಕೂಡಿಗೆ, ಜು.೧೨ : ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬ್ಯಾಡಗೊಟ್ಟ ಗ್ರಾಮದಲ್ಲಿರುವ ಮೇಕೆ ಹಾಲು ಉತ್ಪಾದಕ ಘಟಕದ ಕೇಂದ್ರದ ಅಭಿವೃದ್ಧಿಗೆ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಭರವಸೆ ನೀಡಿದರು.
ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿ, ರಾಜ್ಯದಲ್ಲಿ ಪ್ರಥಮವಾಗಿ ಸರಕಾರದ ವತಿಯಿಂದ ಮೇಕೆ ಹಾಲು ಉತ್ಪಾದಕ ಘಟಕದ ಸ್ಥಾಪಿಸುವ ಚಿಂತನೆಯ ಮೂಲಕ ಈಗಾಗಲೇ ೧ಕೋಟಿ ವೆಚ್ಚದಲ್ಲಿ ಮೇಕೆ ಸಾಕಾಣಿಕೆ ಸಂಬAಧಿಸಿದ ಕಟ್ಟಡ, ಮತ್ತು ಅದಕ್ಕೆ ಬೇಕಾಗುವ ಸಣ್ಣ ಪ್ರಮಾಣದ ಕಾಮಗಾರಿಯು ನಡೆದಿದೆ. ಮುಂದಿನ ದಿನಗಳಲ್ಲಿ ಸಂಬAಧಿಸಿದ ರಾಜ್ಯ ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಜಿಲ್ಲಾ ಮಟ್ಟದ ಸಂಬAಧಿಸಿದ ಇಲಾಖೆಯ ಅಧಿಕಾರಿಗಳ ಮಾಹಿತಿಯನ್ನು ಪಡೆದು. ಅಭಿವೃದ್ಧಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳುವ ಚಿಂತನೆಯನ್ನು ಹರಿಸಲಾಗಿದೆ ಎಂದು ತಿಳಿಸಿದರು.
ಬ್ಯಾಡಗೊಟ್ಟ ಗ್ರಾಮದಲ್ಲಿ ೧೨೦ ಎಕರೆಗಳಷ್ಟು ವಿಶಾಲವಾದ ಸ್ಧಳವಾಗಿರುವ ಹಿನ್ನೆಲೆಯಲ್ಲಿ ಸರಕಾರದ ಹೊಸ ಯೋಜನೆಯ ಅನುಗುಣವಾಗಿ ನೂತನ ಕಟ್ಟಡ ಸೇರಿದಂತೆ ಅಭಿವೃದ್ಧಿಯ ಹಿತದೃಷ್ಟಿಯಿಂದ ಗಮನ ಹರಿಸಿ, ಹೊಸ ಚಿಂತನೆ, ಮತ್ತು ಸ್ಥಳೀಯರ ಅಭಿಪ್ರಾಯದೊಂದಿಗೆ ಉನ್ನತಿಕರಣಗೆ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಡಾ. ಮಂತರ್ ಗೌಡ ತಿಳಿದರು. ಈ ಸಂದರ್ಭ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕೂಡಿಗೆ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಅನಂತ ಸೇರಿದಂತೆ ಗ್ರಾಮಸ್ಥರು ಇದ್ದರ