ಚೆಯ್ಯಂಡಾಣೆ, ಜು. ೧೨: ವೀರಾಜಪೇಟೆಯ ಕೊಡವ ಸಮಾಜದ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ತ್ರಿವೇಣಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಸಂಸ್ಥೆಯ ಅಧ್ಯಕ್ಷ ಮುಲ್ಲೇಂಗಡ ಕಿಟ್ಟು ಕುಟ್ಟಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿ, ಜವಾಬ್ದಾರಿಯುತ ನಾಯಕತ್ವದೊಂದಿಗೆ ಕಾರ್ಯನಿರ್ವಹಿಸುವಂತೆ ಕರೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕೊಡವ ಸಮಾಜದ ಅಧ್ಯಕ್ಷ ಅಮ್ಮಣಿಚಂಡ ರವಿ ಉತ್ತಪ್ಪ ಮಾತನಾಡಿ, ಇಂತಹ ಕಾರ್ಯಕ್ರಮಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಭದ್ರ ಅಡಿಪಾಯವಾಗುತ್ತವೆ, ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡವ ಸಮಾಜದ ಗೌರವ ಕಾರ್ಯದರ್ಶಿ ಮಾಳೇಟಿರ ಶ್ರೀನಿವಾಸ್ ಮಾತನಾಡಿ, ನಾಯಕತ್ವ ವಹಿಸುವ ವಿದ್ಯಾರ್ಥಿಗಳಲ್ಲಿ ಪ್ರಾಮಾಣಿಕತೆ, ಜವಾಬ್ದಾರಿ, ಸೇವಾ ಮನೋಭಾವ ಮತ್ತು ಉತ್ತಮ ನಿರ್ಧಾರ ಕೈಗೊಳ್ಳುವ ಗುಣಗಳು ಇರಬೇಕೆಂದು ತಿಳಿಸಿದರು.
ಮುಲ್ಲೇಂಗಡ ಕಿಟ್ಟು ಕುಟ್ಟಪ್ಪ ಮಾತನಾಡಿ,. ಜೊತೆಗೆ, ವಿದ್ಯಾರ್ಥಿಗಳ ಶೈಕ್ಷಣಿಕ ಯಶಸ್ಸಿಗೆ ಪ್ರಾಥಮಿಕ ಹಂತದಿAದಲೇ ಭದ್ರ ಅಡಿಪಾಯ ಹಾಕಿದ ಶಿಕ್ಷಕರ ಸೇವೆಯನ್ನೂ ಶ್ಲಾಘಿಸಿದರು.
ಈ ಸಂದರ್ಭ ಕಳೆದ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಿಸಲಾಯಿತು. ಶೇ.೧೦೦ ಫಲಿತಾಂಶ ದಾಖಲಿಸಿದ ವಿಷಯ ಶಿಕ್ಷಕರಿಗೆ ಸ್ಮರಣಿಕೆ ಹಾಗೂ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. ಅಲ್ಲದೆ, ಎಲ್ಕೆಜಿಯಿಂದ ೯ನೇ ತರಗತಿಯವರೆಗೆ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಾವೀಣ್ಯ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಯಿತು.
ಸಮಾರಂಭದಲ್ಲಿ ಕೊಡವ ಸಮಾಜದ ಉಪಾಧ್ಯಕ್ಷ ಕಾಣತಂಡ ಜಗದೀಶ್, ತ್ರಿವೇಣಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಮಾರ್ಚಂಡ ಗಣೇಶ್, ಆಡಳಿತ ಮಂಡಳಿ ನಿರ್ದೇಶಕರಾದ ಪಟ್ಟಡ ಮೋಹನ್, ಮಾಳೇಟಿರ ಸ್ವಾತಿ, ಕುಂಡ್ರAಡ ಶಿಲ್ಪ ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಕುಪ್ಪಣಮಾಡ ಪ್ರತಿಮಾ ಸ್ವಾಗತಿಸಿದರು.ಸಂಸ್ಥೆಯ ವಾರ್ಷಿಕ ವರದಿಯನ್ನು ಕೊಣೇರಿರ ಕಾವೇರಮ್ಮ ಮಂಡಿಸಿದರು.ಆಶಾ ಅಕ್ಕಮ್ಮ ಕಾರ್ಯಕ್ರಮ ನಿರೂಪಿಸಿ,ರೂಪ ಭೀಮಯ್ಯ ವಂದಿಸಿದರು.
ಈ ಸಂದರ್ಭ ಗೋಣಿಕೊಪ್ಪಲಿನ ಗುತ್ತಿಗೆದಾರ ಲಕ್ಷಿö್ಮರೆಡ್ಡಿ ಅವರು ಸಂಸ್ಥೆಯ ಅಭಿವೃದ್ಧಿಗಾಗಿ ೨೦ ಸಾವಿರ ದೇಣಿಗೆ ನೀಡಿದರು.