ನಾಪೋಕ್ಲು, ಜು. ೧೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಾರುಗುಂದದಲ್ಲಿ ಪರಿಸರ ಮಾಹಿತಿ ಹಾಗೂ ಗಿಡನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರುಗುಂದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯಿನಿ ಪರ್ವೀನ್ ತಾಜ್ ವಹಿಸಿದ್ದರು. ನಾಟೋಳಂಡ ಜಯರಾಜ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ಶಾಲಾ ಆವರಣದಲ್ಲಿ ಅತಿಥಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇರಿ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಸಂಕಲ್ಪ ಕೈಗೊಂಡರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ಭಾಗವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಚೇರಂಬಾಣೆ ಕೊಡವ ಸಮಾಜ ಉಪಾಧ್ಯಕ್ಷ ನಾಪಂಡ ಪ್ರತಾಪ್, ಪೊಲೀಸ್ ಅಧಿಕಾರಿ ಬೈಚನ ಉತ್ತಪ್ಪ, ಕುಟ್ಟೆಟ್ಟಿರ ಕುಟ್ಟಪ್ಪ, ಒಕ್ಕೂಟದ ಅಧ್ಯಕ್ಷೆ ಜಯಂತಿ, ಮೀನಾಕ್ಷಿ, ವಲಯದ ಮೇಲ್ವಿಚಾರಕರು, ಕೃಷಿ ಮೇಲ್ವಿಚಾರಕರು ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು