ಶನಿವಾರಸಂತೆ, ಜು. ೧೬: ಪಟ್ಟಣದ ಶ್ರೀ ಬೀರಲಿಂಗೇಶ್ವರ-ಪ್ರಬಲ ಭೈರವಿ ದೇವಸ್ಥಾನದಲ್ಲಿ ಅಮಾವಾಸ್ಯೆ ಪೂಜಾ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನೆರವೇರಿತು.

ಅರ್ಚಕರಾದ ಸುಹಾಸ್ ಭಟ್ ಹಾಗೂ ಚಂದ್ರಶೇಖರ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯ ನಡೆಯಿತು. ಶ್ರೀ ಬೀರಲಿಂಗೇಶ್ವರ-ಪ್ರಬಲ ಭೈರವಿ ಹಾಗೂ ಪರಿವಾರ ದೇವತೆಗಳಿಗೆ ಹೂವುಗಳಿಂದ ವಿಶೇಷ ಅಲಂಕಾರ ಮಾಡಿ, ಹಣ್ಣುಕಾಯಿ, ನೈವೇದ್ಯ ಅರ್ಪಿಸಿ, ಮಹಾಮಂಗಳಾರತಿ ನಡೆದ ಬಳಿಕ ತೀರ್ಥ-ಪ್ರಸಾದ ವಿನಿಯೋಗವಾಯಿತು. ಭಕ್ತಾದಿಗಳು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದು ದಾಸೋಹ ಏರ್ಪಡಿಸಲಾಗಿತ್ತು. ದೇವಸ್ಥಾನ ಸೇವಾ ಸಮಿತಿ ಪದಾಧಿಕಾರಿಗಳು ಹಾಜರಿದ್ದರು.