ಸೋಮವಾರಪೇಟೆ, ಜು. ೧೬: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಮೀಪದ ತಣ್ಣೀರುಹಳ್ಳ ಗ್ರಾಮದ ಶ್ರೀ ಬಸವೇಶ್ವರ ದೇವಾಲಯ ಅಭಿವೃದ್ಧಿ ಕಾರ್ಯಗಳಿಗೆ ರೂ.೧.೫೦ ಲಕ್ಷ ಅನುದಾನವನ್ನು ಹಸ್ತಾಂತರಿಸಲಾಯಿತು.
ಯೋಜನೆಯ ಜಿಲ್ಲಾ ನಿರ್ದೇಶಕ ವಿಠಲ್ ಸಾಲಿಯಾನ್ ಅವರು ಶ್ರೀ ಕ್ಷೇತ್ರದಿಂದ ಬಿಡುಗಡೆ ಮಾಡಿದ ಅನುದಾನವನ್ನು ದೇವಾಲಯ ಸಮಿತಿ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ನಂತರ ಮಾತನಾಡಿದ ಅವರು ಗ್ರಾಮಗಳಲ್ಲಿ ದೇವಾಲಯ ನಿರ್ಮಾಣದಿಂದ ಸಂಸ್ಕಾರಯುತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ದೇವಾಲಯದ ಪರಿಸರ ರಕ್ಷಣೆ, ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು. ಈ ಸಂದರ್ಭ ಸೋಮವಾರಪೇಟೆ ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ, ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಸುರೇಶ್, ದೇವಸ್ಥಾನದ ಸಮಿತಿ ಅಧ್ಯಕ್ಷ ಕೆ. ರವಿ, ಉಪಾಧ್ಯಕ್ಷ ಭುವನೇಂದ್ರ, ಒಕ್ಕೂಟದ ಅಧ್ಯಕ್ಷೆ ರೂಪ, ಸೇರಿದಂತೆ ದೇವಸ್ಥಾನ ಅರ್ಚಕರು, ಯೋಜನೆಯ ವಲಯ ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಗ್ರಾಮಸ್ಥರು ಇದ್ದರು.