ಸೋಮವಾರಪೇಟೆ, ಜು. ೧೭: ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣದ ತಾಲೂಕು ಘಟಕದ ವಾರ್ಷಿಕ ಮಹಾಸಭೆ ಅಧ್ಯಕ್ಷ ಸಂತೋಷ್ ಅಧ್ಯಕ್ಷತೆಯಲ್ಲಿ ಸ್ಥಳೀಯ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಸಭೆಯಲ್ಲಿ ಅಧ್ಯಕ್ಷ ಸಂತೋಷ್ ಮಾತನಾಡಿ, ನಾಡು ನುಡಿಯ ಸೇವೆ ಮಾಡುತ್ತಿರುವ ರಕ್ಷಣಾ ವೇದಿಕೆ, ಇನ್ನಷ್ಟು ಸೇವಾ ಕಾರ್ಯಗಳನ್ನು ಕೈಗೊಳ್ಳಬೇಕಿದೆ. ಇದರೊಂದಿಗೆ ಸಂಘಟನೆಯನ್ನೂ ಬಲಪಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಕಿಕ್ ಬಾಕ್ಸಿಂಗ್‌ನಲ್ಲಿ ಬೆಳ್ಳಿ ಪದಕ ಪಡೆದಿರುವ ಸೋಮವಾರಪೇಟೆ ಜಿ.ಎಂ.ಪಿ. ಶಾಲಾ ವಿದ್ಯಾರ್ಥಿಗಳಾದ ಮಿತೇಶ್ ಹಾಗೂ ರಿತನ್ ಅವರುಗಳನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಪಿ. ರಾಜು, ಮಹಿಳಾ ಘಟಕದ ಅಧ್ಯಕ್ಷೆ ಜ್ಯೋತಿ ಕುದುಪಜೆ, ಸಂಚಾಲಕ ಗೋವಿಂದ, ಕುಶಾಲನಗರ ತಾಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ, ಸೋಮವಾರಪೇಟೆ ಮಹಿಳಾ ಘಟಕದ ಅಧ್ಯಕ್ಷೆ ಆಶಾ ಸೇರಿದಂತೆ ಇತರರು ಇದ್ದರು.