ಕುಶಾಲನಗರ, ಜು. ೧೬: ಕುಶಾಲನಗರ ಭೂಮಿಕಾ ಮಹಿಳಾ ಹಿತರಕ್ಷಣಾ ವೇದಿಕೆ ವತಿಯಿಂದ ಗಾನಕೋಗಿಲೆ ಎಸ್ ಜಾನಕಿ ಅವರ ನಿಧನ ಹಿನ್ನೆಲೆಯಲ್ಲಿ ಸಂತಾಪ ಸೂಚಿಸಲಾಯಿತು.
ವೇದಿಕೆ ಅಧ್ಯಕ್ಷೆ ಜೆ. ಫಿಲೋಮಿನಾ ಅಧ್ಯಕ್ಷತೆಯಲ್ಲಿ ಕುಶಾಲನಗರ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಎಸ್. ಜಾನಕಿ ಅವರ ಹಾಡುಗಳನ್ನು ಹಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭ ವೇದಿಕೆ ಪ್ರಮುಖರಾದ ವನಿತಾ ಚಂದ್ರಮೋಹನ್, ಪಾರ್ವತಿ ಶಾಂತಿ ಗಣೇಶ್, ನವಮಣಿ, ಫಿಲೋಮಿನಾ ಮಾರ್ಗರೇಟ್, ಎಲಿಜಬೆತ್ ಮತ್ತಿತರರು ಇದ್ದರು. ಮಡಿಕೇರಿ, ಜು. ೧೬: ಇತ್ತೀಚೆಗೆ ಇಹಲೋಕ ತ್ಯಜಿಸಿದ ಬಹುಭಾಷಾ ಗಾಯಕಿ ಎಸ್. ಜಾನಕಿ ಅವರಿಗೆ ಸಮರ್ಥ ಕನ್ನಡಿಗರು ಕೊಡಗು ಜಿಲ್ಲಾ ಘಟಕದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಸಂಚಾಲಕಿ ಕೆ ಜಯಲಕ್ಷಿö್ಮ, ಸೌಮ್ಯ ಭಟ್, ಪವಿತ್ರಾ ಸಂತೋಷ್, ಅನಿತಾ, ಅಂಬಿಕಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.