ಭಾಗಮAಡಲ, ಜು. ೧೬: ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಾಲಯಗಳಲ್ಲಿ ಪ್ರತಿ ತಿಂಗಳು ಅಧಿಕಾರಿಗಳ ಸಮ್ಮುಖದಲ್ಲಿ ಹುಂಡಿ ಎಣಿಕೆ ಮಾಡುವಂತೆ ಸರ್ಕಾರದ ನಿರ್ದೇಶನದ ಹಿನ್ನೆಲೆಯಲ್ಲಿ ಭಾಗಮಂಡಲದ ಭಗಂಡೇಶ್ವರ ದೇವಾಲಯದಲ್ಲಿ ಭಾಗಮಂಡಲ - ತಲಕಾವೇರಿ ದೇವಾಲಯಗಳ ಹುಂಡಿ ಎಣಿಕೆ ಕಾರ್ಯ ಗುರುವಾರ ನಡೆಯಿತು. ದೇವಾಲಯದಲ್ಲಿ ಎರಡು ಸಿಸಿ ಕ್ಯಾಮೆರಾ ಹಾಗೂ ಒಂದು ವೀಡಿಯೋ ಚಿತ್ರೀಕರಣದೊಂದಿಗೆ ಹುಂಡಿ ಎಣಿಕೆ ನಡೆಸಲಾಯಿತು. ಆಡಳಿತ ಅಧಿಕಾರಿಯ ಪ್ರತಿನಿಧಿಯಾಗಿ ಜಿಲ್ಲಾಧಿಕಾರಿ ಕಚೇರಿಯಿಂದ ಶಿರಸ್ತೆದಾರ್ ಮಧುಕರ್, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ ಕೆನರಾ ಬ್ಯಾಂಕ್ ಸಿಬ್ಬಂದಿಯ ಸಮ್ಮುಖದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು.

ತಲಕಾವೇರಿ - ಭಾಗಮಂಡಲ ದೇವಾಲಯಗಳಲ್ಲಿ ಒಂದು ತಿಂಗಳಲ್ಲಿ ೯ ಲಕ್ಷದ ಏಳು ಸಾವಿರದ ಏಳುನೂರ ಹದಿನೇಳು ರೂಪಾಯಿ ಸಂಗ್ರಹವಾಗಿದೆ. ಈ ಸಂದರ್ಭ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್, ಪಾರು ಪತ್ತೆಗಾರ ಪೊನ್ನಣ್ಣ, ತಕ್ಕರಾದ ಕೋಡಿ ಮೋಟಯ್ಯ, ಬಳ್ಳಡ್ಕ ಅಪ್ಪಾಜಿ ಉಪಸ್ಥಿತರಿದ್ದರು. - ಸುನಿಲ್