ಮಡಿಕೇರಿ, ಜು. ೧೬: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ರಾಷ್ಟಿçÃಯ ನೈಸರ್ಗಿಕ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಪ್ರಸಕ್ತ ಸಾಲಿನಲ್ಲಿ ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಹಾಗೂ ದೇವರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯು ನೈಸರ್ಗಿಕ ಕೃಷಿ, ಜಾನುವಾರುಗಳು ಮತ್ತು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳ ಆಧಾರದ ಮೇಲೆ ಅವಲಂಬಿತವಾಗಿರುವ ರಾಸಾಯನಿಕ ಮುಕ್ತ ಕೃಷಿ ಪದ್ದತಿಯಾಗಿರುತ್ತದೆ.
ರಾಷ್ಟಿçÃಯ ನೈಸರ್ಗಿಕ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ೫೦ ಹೆಕ್ಟೇರ್ ಪ್ರದೇಶದ ಗುಚ್ಛ ಮಾದರಿಯಲ್ಲಿ ಅನುಷ್ಠಾ£ ಗೊಳಿಸಬೇಕಾಗಿದ್ದು, ಒಂದು ಗ್ರಾಮ ಪಂಚಾಯಿತಿ ಅಥವಾ ೨ ರಿಂದ ೩ ಗ್ರಾಮ ಪಂಚಾಯಿತಿಯಲ್ಲಿ ಸುಮಾರು ೧೨೫ ರೈತರನ್ನೊಳಗೊಂಡAತೆ ಒಟ್ಟು ೫೦ ಹೆಕ್ಟೇರ್ ಪ್ರದೇಶದಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನ ಮಾಡಬೇಕಿದೆ. ಪ್ರತಿ ರೈತರಿಗೆ ಗರಿಷ್ಟ ೧ ಎಕರೆ ಪ್ರದೇಶದಲ್ಲಿ ಸಾವಯವ ಕೃಷಿಯನ್ನು ಕೈಗೊಳ್ಳುವ ಅವಕಾಶವಿದೆ. ನೈಸರ್ಗಿಕ ಕೃಷಿ ಅನುಷ್ಠಾನ ಮಾಡುವ ರೈತರಿಗೆ ನೇರ ನಗದು ವರ್ಗಾವಣೆ ಮಾಡುವ ಮೂಲಕ ಪ್ರತಿ ರೈತರಿಗೆ ಆರ್ಥಿಕ ವರ್ಷಕ್ಕೆ ರೂ.೪ ಸಾವಿರ ವರೆಗೆ ಪ್ರೋತ್ಸಾಹಧನ ನೀಡಲು ಅವಕಾಶ ಇದೆ.
ಕಾರ್ಯಕ್ರಮವನ್ನು ಗ್ರಾಮ ಮಟ್ಟದಲ್ಲಿ ಆಯ್ಕೆಯಾದ ಕ್ಲಸ್ಟರ್ಗಳಡಿ ಕಾರ್ಯನಿರ್ವಹಿಸುತ್ತಿರುವ ಕೃಷಿ ಸಖಿಯವರು ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಅನುಷ್ಠಾನ ಮಾಡಲಾಗುತ್ತದೆ. ನೈಸರ್ಗಿಕ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳಲು ಇಚ್ಛಿಸುವ ರೈತರಿಗೆ ಬಯೋ ಇನ್ಫುಟ್ ರೀಸೋರ್ಸ್ (ಬಿಆರ್ಸಿ)ಗಳ ಮೂಲಕವೂ ಬೆಂಬಲವನ್ನು ನೀಡಲಾಗುವುದು.
ಆದ್ದರಿಂದ ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ಕೃಷಿ ಜಮೀನಿನ ಪಹಣಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಮತ್ತು ಇತ್ತೀಚಿನ ಪಾಸ್ಪೋರ್ಟ್ ಸೈಜ್ ಭಾವಚಿತ್ರದೊಂದಿಗೆ ರೈತ ಸಂಪರ್ಕ ಕೇಂದ್ರ, ಪೊನ್ನಂಪೇಟೆ ಹೋಬಳಿ ಕಚೇರಿಗೆ ಭೇಟಿ ನೀಡಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ಸಹಾಯಕ ಕೃಷಿ ನಿರ್ದೇಶಕರು ಕೋರಿದ್ದಾರೆ.
ಈ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಮಾಯಮುಡಿ ಮತ್ತು ದೇವರಪುರ ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ, ಪೊನ್ನಂಪೇಟೆ ಕಚೇರಿಯನ್ನು ಸಂಪರ್ಕಿಸಬಹುದು. ರೈತರು ದೂ.ಸಂ.೬೩೬೦೪೦೯೩೨೭ ಯನ್ನು ಸಂಪರ್ಕಿಸಬಹುದು ಎಂದು ವೀರಾಜಪೇಟೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.