ಸೋಮವಾರಪೇಟೆ, ಜು. ೧೯: ತಾಲೂಕು ಪಂಚಾಯಿತಿ ವತಿಯಿಂದ ಎಸ್.ಐ.ಆರ್.ಬಗ್ಗೆ ಜಾಗೃತಿ-ಅರಿವು ಮೂಡಿಸುವ ಉದ್ದೇಶದಿಂದ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಯಿತು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಪರಮೇಶ್ ಕುಮಾರ್ ಅವರ ನೇತೃತ್ವದಲ್ಲಿ ಸ್ಥಳೀಯ ಜ್ಞಾನ ವಿಕಾಸ ಶಾಲೆಯ ಮಕ್ಕಳಿಂದ ಪಟ್ಟಣದಲ್ಲಿ ಕಾಲ್ನಡಿಗೆ ಜಾಥಾ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಎಸ್‌ಐಆರ್ ಬಗ್ಗೆ ಜಾಗೃತಿ ಮೂಡಿಸಲಾಯಿತು.

ನಂತರ ಪಟ್ಟಣ ವ್ಯಾಪ್ತಿಯ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಎಸ್‌ಐಆರ್ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿ, ತಮ್ಮ ಪೋಷಕರು ಹಾಗೂ ಸಂಬAಧಿಕರಿಗೆ ಇದರ ಬಗ್ಗೆ ಮಾಹಿತಿ ನೀಡುವಂತೆ ತಿಳಿಸಲಾಯಿತು.

ಈ ಸಂದರ್ಭ ತಾಲೂಕು ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮಂಜೇಶ್, ಶಾಲಾ ಮುಖ್ಯ ಶಿಕ್ಷಕಿ ಕವಿತಾ, ಸಹಶಿಕ್ಷಕರು ಇದ್ದರು.