ಚೆಟ್ಟಳ್ಳಿ, ಜು. ೧೯: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚೆಟ್ಟಳ್ಳಿ ಯಲ್ಲಿ ಶನಿವಾರ ಮಾದಕ ವಸ್ತುಗಳ ದುರುಪಯೋಗ ತಡೆಗಟ್ಟುವಿಕೆ ಹಾಗೂ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಚೆಟ್ಟಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ಪಟ್ರಪಂಡ ಮೊಣ್ಣಪ್ಪ ಅವರು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳು, ಅವುಗಳಿಂದ ದೂರವಿರುವ ಅಗತ್ಯ ಹಾಗೂ ಉತ್ತಮ ಜೀವನ ಮೌಲ್ಯಗಳ ಕುರಿತು ಅರಿವು ಮೂಡಿಸಿದರು. ವಿದ್ಯಾರ್ಥಿಗಳು ಯಾವುದೇ ರೀತಿಯ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೆ ಶಿಕ್ಷಣ ಮತ್ತು ಉತ್ತಮ ವ್ಯಕ್ತಿತ್ವ ನಿರ್ಮಾಣದತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕಿ ರಮಾ, ಸಿಆರ್ ಪಿ ಅಶೋಕ್, ಪೊಲೀಸ್ ಸಿಬ್ಬಂದಿ ವಿಠಲ್ ಒಡೆಯರ್, ಶಾಲಾಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹಾಗು ಪೋಷಕರು ಉಪಸ್ಥಿತರಿದ್ದರು.