ಸೋಮವಾರಪೇಟೆ, ಜು. ೨೧: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯದಲ್ಲಿ ಸೋಮವಾರಪೇಟೆ ತಾಲೂಕು ಶೇ.೭೫ರಷ್ಟು ಪ್ರಗತಿ ಸಾಧಿಸಿದ್ದು, ಉಳಿದ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ರಾಜಕೀಯ ಪಕ್ಷಗಳ ಬಿಎಲ್ಎಗಳು ಹಾಗೂ ಬಿಎಲ್ಓಗಳ ಸಹಕಾರ ಅತ್ಯಗತ್ಯವಾಗಿದೆ ಎಂದು ತಾಲೂಕು ದಂಡಾಧಿಕಾರಿ ಹಾಗೂ ಮತದಾರರ ನೋಂದಣಾಧಿಕಾರಿ ಕೆ.ಕೆ. ಕೃಷ್ಣಮೂರ್ತಿ ಹೇಳಿದರು.
ಇಲ್ಲಿನ ತಾಲೂಕು ಕಚೇರಿಯಲ್ಲಿ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನ ೧೦೯ ಮತಗಟ್ಟೆಗಳಲ್ಲಿ ಮತದಾರರಿಗೆ ಎನ್ಯೂಮರೇಷನ್ ಫಾರ್ಮ್ಗಳನ್ನು ವಿತರಿಸಿ, ಮರಳಿ ಪಡೆದು ಬಿಎಲ್ಒ ಆ್ಯಪ್ ಮೂಲಕ ಡಿಜಟಲೀಕರಣ ಕಾರ್ಯವನ್ನು ಈಗಾಗಲೇ ಶೇ.೭೫ರಷ್ಟು ಪೂರ್ಣಗೊಳಿಸಲಾಗಿದೆ ಎಂದರು.
ಮೊದಲ ಹಂತದಲ್ಲಿ ಜುಲೈ ೨೯ರಂದು ಪೂರ್ಣಗೊಳ್ಳಬೇಕಿದ್ದ ವಿಶೇಷ ಪರಿಷ್ಕರಣೆ ಕಾರ್ಯವನ್ನು ಕೆಲವು ಭಾಗಗಳಲ್ಲಿ ಪ್ರಗತಿ ನಿರೀಕ್ಷಿತ ಮಟ್ಟ ತಲುಪದ ಕಾರಣ ಭಾರತ ಚುನಾವಣಾ ಆಯೋಗ ಆಗಸ್ಟ್ ೮ ರವರೆಗೆ ವಿಸ್ತರಿಸಿದೆ. ಉಳಿದ ಅವಧಿಯಲ್ಲಿ ಇನ್ನೂ ಶೇ.೫ರಿಂದ ೬ರಷ್ಟು ಫಾರ್ಮ್ಗಳನ್ನು ಸಂಗ್ರಹಿಸಿ ಡಿಜಿಟಲೈಸೇಶನ್ ಮಾಡಲು ಸಾಧ್ಯವಾಗಲಿದೆ. ಉಳಿದ ಮತದಾರರಲ್ಲಿ ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊAಡವರು ಹಾಗೂ ಪುನರಾವರ್ತಿತ ಹೆಸರುಗಳಿರುವವರ ಸಂಖ್ಯೆ ಹೆಚ್ಚಿರುವುದರಿಂದ ಶೇ.೧೦೦ರಷ್ಟು ಗುರಿ ಸಾಧಿಸುವುದು ಕಷ್ಟಕರವಾಗಿದೆ ಎಂದು ತಿಳಿಸಿದರು.
ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊAಡವರು ಹಾಗೂ ಪತ್ತೆಯಾಗದ ಮತದಾರರ ಎಎಸ್ಡಿ (ಂbseಟಿಣ, Shiಜಿಣeಜ, ಆeಚಿಜ) ಪಟ್ಟಿಯನ್ನು ಸಿದ್ಧಪಡಿಸಿ ರಾಜಕೀಯ ಪಕ್ಷಗಳ ಬಿಎಲ್ಎಗಳಿಗೆ ನೀಡಲಾಗಿದೆ. ಈ ಪಟ್ಟಿಯನ್ನು ಪರಿಶೀಲಿಸಿ ನಿಖರ ಮಾಹಿತಿ ಒದಗಿಸುವ ಮೂಲಕ ಅಧಿಕಾರಿಗಳಿಗೆ ಸಹಕರಿಸುವಂತೆ ಮನವಿ ಮಾಡಿದರು.
ಮತದಾರರ ಹೆಸರುಗಳನ್ನು ಏಕಪಕ್ಷೀಯವಾಗಿ ಅಳಿಸುವ ಪ್ರಶ್ನೆಯೇ ಇಲ್ಲ. ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದುಹಾಕುವ ಪ್ರತಿಯೊಂದು ಪ್ರಕ್ರಿಯೆಯೂ ಬಿಎಲ್ಓಗಳ ಅಧಿಕೃತ ಲಾಗಿನ್ ಮತ್ತು ಒಟಿಪಿ ದೃಢೀಕರಣದ ಮೂಲಕ ಮಾತ್ರ ನಡೆಯುತ್ತದೆ. ಹೀಗಾಗಿ ಅನಧಿಕೃತವಾಗಿ ಮತದಾರರ ಪಟ್ಟಿಯಲ್ಲಿ ಬದಲಾವಣೆ ಮಾಡಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಅರ್ಹ ಮತದಾರರು ಯಾರೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂಬುದೇ ಚುನಾವಣಾ ಆಯೋಗದ ಉದ್ದೇಶವಾಗಿದೆ. ಬಿಎಲ್ಎಗಳು, ಬಿಎಲ್ಗಳು, ರಾಜಕೀಯ ಪಕ್ಷಗಳು, ಚುನಾವಣಾ ಸಿಬ್ಬಂದಿ ಹಾಗೂ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು. ಸಭೆಯಲ್ಲಿ ಚುನಾವಣಾ ಶಿರಸ್ತೇದಾರ ಲೋಹಿತ್ ಕುಮಾರ್ ವಿ.ಎನ್., ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹಾಗೂ ನೋಡಲ್ ಅಧಿಕಾರಿ ಕೃಷ್ಣಪ್ರಸಾದ್ ಉಪಸ್ಥಿತರಿದ್ದರು.
ಬಿಜೆಪಿಯಿಂದ ಬಿಎಲ್ಎಗಳಾದ ಎಸ್.ಆರ್. ಸೋಮೇಶ್, ಎನ್.ಟಿ. ಮಹೇಶ್ ತಿಮ್ಮಯ್ಯ, ದರ್ಶನ್ ಜೋಯಪ್ಪ ಹಾಗೂ ಕಾಂಗ್ರೆಸ್ನಿAದ ವಿ. ಸಂದೀಪ್, ಕೆ.ಜೆ. ಸುನಿಲ್, ಎಂ.ಎ. ರುಬೀನಾ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.