ಮಡಿಕೇರಿ, ಜು. ೨೧: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಮತ್ತು ಲಯನ್ಸ್ ಕ್ಲಬ್ ಸಹಯೋಗದಲ್ಲಿ ಸ್ನೇಹಾಶ್ರಯ ಸಮಿತಿ ಓಡಿಪಿಯ ೧೮ನೇ ವಾರ್ಷಿಕೋತ್ಸವ ಹಾಗೂ ಕಾನೂನು ಅರಿವು ಕಾರ್ಯಾಗಾರ ಮತ್ತು ಅಭಿನಂದನಾ ಕಾರ್ಯಕ್ರಮವು ತಾ. ೨೨ ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಶುಭ, ಮೈಸೂರು ಓಡಿಪಿ ಸಂಸ್ಥೆಯ ನಿರ್ದೇಶಕರು ಹಾಗೂ ಸ್ನೇಹಾಶ್ರಯ ಸಮಿತಿ ಅಧ್ಯಕ್ಷ ಕುರಿಯನ್, ಸಂತ ಮೈಕಲರ ದೇವಾಲಯದ ಧರ್ಮಗುರುಗಳು ಹಾಗೂ ಸಂತ ಮೈಕಲರ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಪ್ಯಾಟ್ರಿಕ್ ಕ್ಸೇವಿಯರ್, ಕೊಡಗು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ಕುಮಾರ್, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಸನತ್ ಕುಮಾರ್, ಮಡಿಕೇರಿ ಸ್ನೇಹಾಶ್ರಯ ಸಮಿತಿ ಕಾರ್ಯಾಧ್ಯಕ್ಷ ಕೆ.ಟಿ. ಬೇಬಿ ಮ್ಯಾಥ್ಯೂ, ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಟಿ. ಅನಿಲ್, ಮಡಿಕೇರಿ ಲಯನ್ಸ್ ಕ್ಲಬ್ ಅಧ್ಯಕ್ಷ ಮೋಹನ್ ಕುಮಾರ್, ಡಾ. ಸಿದ್ದಯ್ಯ, ಶಕ್ತಿ ಪತ್ರಿಕೆ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ನೇತ್ರ ತಜ್ಞ ಡಾ. ಪ್ರಶಾಂತ್ ಪಾಲ್ಗೊಳ್ಳಲಿದ್ದಾರೆ.