ಕುಶಾಲನಗರ, ಜು. ೨೧: ಕುಶಾಲನಗರ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲನ್ನು ಶಾಸಕ ಮಂತರ್ ಗೌಡ ಆಲಿಸಿದರು.

ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತ ಗ್ರಾಮಗಳ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಚೇರಿಗೆ ಆಗಮಿಸಿ ತಮ್ಮ ಗ್ರಾಮದ ಸಮಸ್ಯೆ ಬಗ್ಗೆ ಶಾಸಕರ ಗಮನಕ್ಕೆ ತಂದರು.

ಅರ್ಜಿಗಳ ಪರಿಶೀಲನೆ ನಡೆಸಿದ ಶಾಸಕ ಡಾ ಮಂತರ್ ಗೌಡ ಸಂಬAಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಗಳ ಪರಿಹಾರಕ್ಕೆ ಸೂಚನೆ ನೀಡಿದರು. ಗ್ರಾಮಗಳಲ್ಲಿ ಚರಂಡಿ ರಸ್ತೆ ವ್ಯವಸ್ಥೆ, ಸೇರಿದಂತೆ ಮೂಲಭೂತ ಸೌಕರ್ಯಗಳ ಬಗ್ಗೆ ಹಲವರು ಶಾಸಕರೊಂದಿಗೆ ಸಮಸ್ಯೆ ಬಗೆಹರಿಸಿಕೊಡುವಂತೆ ಮನವಿ ಮಾಡಿದರು.

ಈ ಸಂದರ್ಭ ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಪ್ರಮುಖರಾದ ಮಂಜುನಾಥ ಗುಂಡೂರಾವ್, ಕಚೇರಿ ಆಪ್ತ ಸಹಾಯಕ ರಂಜು ಹೆಬ್ಬಾಲೆ ಮತ್ತಿತರರು ಇದ್ದರು.