ಮಡಿಕೇರಿ, ಜು. ೨೩: ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆ, ಭಾರತೀಯ ರೆಡ್ಕ್ರಾಸ್ ಸೊಸೈಟಿ ಕೊಡಗು ಶಾಖೆ ಮತ್ತು ರೋಟರಿ ಮಿಸ್ಟಿ ಹಿಲ್ಸ್ ಮಡಿಕೇರಿ ಹಾಗೂ ಸಮುದಾಯದ ಸಹಭಾಗಿತ್ವದೊಂದಿಗೆ ವಿಶೇಷಚೇತನರಿಗೆ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ನಗರದ ಬಾಲಭವನದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ರಾಜೇಶ್ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪ್ರತಿಯೊಬ್ಬ ವ್ಯಕ್ತಿಯೂ ಈ ತರಬೇತಿಯ ಉಪಯೋಗ ಪಡೆದು, ಜೀವನದಲ್ಲಿ ಆರ್ಥಿಕವಾಗಿ ಸ್ವಾವಲಂಬಿಯಾಗಬೇಕೆAದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೊಡಗು ಶಾಖೆಯ ಭಾರತೀಯ ರೆಡ್ಕ್ರಾಸ್ ಸೊಸೈಟಿಯ ಸಭಾಪತಿ ರವೀಂದ್ರ ರೈ ಮಾತನಾಡಿ, ಎಸ್.ವಿ.ವೈ.ಎಂ. ಸಂಸ್ಥೆಯಿAದ ಉತ್ತಮ ಕಾರ್ಯಕ್ರಮಗಳನ್ನು ವಿಶೇಷಚೇತನರಿಗೆ ನೀಡುತ್ತಿದ್ದು, ಭಾರತೀಯ ರೆಡ್ಕ್ರಾಸ್ ಸೊಸೈಟಿಯ ಸಹಕಾರ ಯಾವಾಗಲೂ ಇರುತ್ತದೆ. ಈ ಮೂರು ದಿನಗಳ ತರಬೇತಿಯನ್ನು ಎಲ್ಲರೂ ಪಡೆದು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದರು.
ಅಧ್ಯಕ್ಷತೆಯನ್ನು ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್ ಕೊಡಗು ಶಾಖೆಯ ಸಲಹಾ ಸಮಿತಿ ಸದಸ್ಯ ಅಜಯ್ ಸೂದ್ ವಹಿಸಿದ್ದರು. ತರಬೇತಿ ಕಾರ್ಯಕ್ರಮದಲ್ಲಿ ೩೨ ವಿಶೇಷಚೇತನರು ಮತ್ತು ಆರೈಕೆದಾರರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್.ವಿ.ವೈ.ಎಂ. ಸಂಸ್ಥೆಯ ಕೊಡಗು ಶಾಖೆಯ ಕಾರ್ಯಕ್ರಮ ವ್ಯವಸ್ಥಾಪಕರಾದ ಅಂಕಾಚಾರಿ, ರವಿಕಿರಣ್ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.