ಸೋಮವಾರಪೇಟೆ,ಜು.೨೩: ಕೊಡಗು ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ತಾ. ೨೫ರಂದು ಸ್ಥಳೀಯ ಸಂತ ಜೋಸೆಫರ ಪದವಿ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಮತ್ತು ರಕ್ತದಾನ ಶಿಬಿರ ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿದೆ.
ಕಾರ್ಯಕ್ರಮವನ್ನು ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಪತ್ರಕರ್ತರ ಸಂಘದ ತಾಲೂಕು ಘಟಕದ ಅಧ್ಯಕ್ಷ ಎಚ್.ಆರ್. ಹರೀಶ್ ಕುಮಾರ್ ವಹಿಸಲಿದ್ದಾರೆ. ರಕ್ತದಾನ ಶಿಬಿರವನ್ನು ಸಂತ ಜೋಸೆಫರ ಶಿಕ್ಷಣ ಸಂಸ್ಥೆಯ ಕರೆಸ್ಪಾಂಡೆAಟ್ ಅವಿನಾಶ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ, ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಕೆ.ಎ. ಪ್ರಕಾಶ್, ಕೊಡಗು ಪತ್ರಕರ್ತರ ಸಂಘದ ಉಪಾಧ್ಯಕ್ಷ ತೇಲಪಂಡ ಕವನ್ ಕಾರ್ಯಪ್ಪ, ಜಿಲ್ಲಾ ಕ್ಷೇಮ ನಿಧಿ ಅಧ್ಯಕ್ಷ ಜಿ.ವಿ. ರವಿಕುಮಾರ್, ಕೊಡಗು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ ಎಸ್.ಎ. ಮುರಳೀಧರ್ ಉಪಸ್ಥಿತರಿರುವರು ಎಂದು ಕಾರ್ಯದರ್ಶಿ ಡಿ.ಪಿ. ಲೋಕೇಶ್ ತಿಳಿಸಿದ್ದಾರೆ.