ಕೂಡಿಗೆ, ಜು. ೨೩: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ದೇವಾಲಯದ ಅಭಿವೃದ್ಧಿಗೆ ಮತ್ತು ಅದಕ್ಕೆ ಸಂಬAಧಿಸಿದ ಸಮುದಾಯದ ಭವನ ನಿರ್ಮಾಣಕ್ಕೆ ಸಂಬAಧಿಸಿದ ಇಲಾಖೆಯ ಮೂಲಕ ಅನುದಾನ ನೀಡುವುದಾಗಿ ಶಾಸಕ ಡಾ. ಮಂತರ್ ಗೌಡ ಭರವಸೆ ನೀಡಿದ್ದಾರೆ.
ಶ್ರೀ ಬಸವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಅನುದಾನವನ್ನು ಒದಗಿಸುವ ಭರವಸೆ ನೀಡಿದರು.
ಈ ಸಂದರ್ಭ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಶಾಸಕರ ಅನುದಾನದಲ್ಲಿ ಈ ಭಾಗದಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರಾದ ಅನಂತ, ಶಿವಕುಮಾರ್, ಚಂದ್ರು, ಶ್ರೀ ಬಸವೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಧನಂಜಯ, ಕಾರ್ಯದರ್ಶಿ ನಾಗೇಶ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.